ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್

ರಾಮನಗರ: ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ತನ್ನ ಗಂಡನ ಕಾಗದ ಪತ್ರ ಸರಿಪಡಿಸಲು ಹಣದ ಅವಶ್ಯಕತೆ ಇತ್ತು. ಆಗ ಸಾಲ‌ ಕೊಡಿಸುವುದಾಗಿ ಚಲುವರಾಮು ಭರವಸೆ ನೀಡಿದ್ದರು. ಬಳಿಕ ಸಾಲ ಕೊಡುವವರು ಬರುತ್ತಿದ್ದಾರೆ ಬನ್ನಿ ಎಂದು ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದು, ಸಾಲ ಕೊಡುವವರ ಕಚೇರಿ ಇಲ್ಲೇ ಇದೆ ಎಂದು ಹೇಳಿದ್ದ. ಬಳಿಕ ಮತ್ತು ಬರಿಸಿ ಲಾಡ್ಜ್​ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ತಡೆಯೊಡ್ಡಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದಾಗಿ ಮಹಿಳೆ ದೂರಿದ್ದಾಳೆ.

ಅಲ್ಲದೇ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನ ದೇಹ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದ, ನಿನ್ನ ಖಾಸಗಿ ವಿಡಿಯೋ ಇದೆ. ಎಲ್ಲಾ ಕಡೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ಮಹಿಳೆ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಇದೀಗ ಸಾತನೂರು ಪೊಲೀಸರು, ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

No Comments

Leave A Comment