......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಪುತ್ತೂರು: ಕಂದಕಕ್ಕೆ ಉರುಳಿ ಬಿದ್ದ ಕಾರು, ಮೂವರ ಸಾವು

ಮಂಗಳೂರು, ಡಿಸೆಂಬರ್​ 28: ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ  ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಮೃತರು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು ಎಂದು ತಿಳಿದುಬಂದಿದೆ.

ಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿತ್ತು. ನಸುಕಿನ ಜಾವ 4:15ರ ಸುಮಾರಿಗೆ ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

No Comments

Leave A Comment