ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ಜ.4ಕ್ಕೆ ಶ್ರೀಕೃಷ್ಣ ಸೇವಾ ಬಳಗದ ಆಶ್ರಯದಲ್ಲಿ ಉಡುಪಿ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥಶ್ರೀಪಾದರಿಗೆ ಗುರುವಂದನೆ ಕಾರ್ಯಕ್ರಮ
ಉಡುಪಿ: ಅದಮಾರು ಮಠದ ಶ್ರೀಕೃಷ್ಣ ಸೇವಾ ಬಳಗದಿಂದ ವಿಶ್ವಾರ್ಪಣಂ (ಚಿಂತನ, ಮಂಥನ, ಸಂವಾದ) ಕಾರ್ಯಕ್ರಮದಡಿಯಲ್ಲಿ ಜ.4ರಂದು ಅಪರಾಹ್ನ 2.30 ಗಂಟೆಗೆ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಗುರುವಂದನೆ ಕಾರ್ಯಕ್ರಮವು ಅದ್ದೂರಿಯಿ೦ದ ನಡೆಯಲಿದೆ. ಉಡುಪಿಯ ಶ್ರೀಪೂರ್ಣಪ್ರಜ್ಞ ಅಡಿಟೋರಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಅದಮಾರು ಮಠದ ಹಿರಿಯ ಯತಿ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಆಶೀರ್ವಚನ ನೀಡುವರು.
ಇದೇ ಸಂದರ್ಭದಲ್ಲಿ ಉತ್ತರ ಭಾರತದ ಚಿಂತಕಿ ಮೀನಾಕ್ಷಿ ಸೆಹ್ರಾವತ್ ‘ಬಾಂಗ್ಲಾ-ಪಾಠ’ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಬಳಗದ ಪಕಟಣೆ ತಿಳಿಸಿದೆ.