.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ; 20,11,900 ರೂ. ಮೌಲ್ಯದ ಸೊತ್ತು ವಶ

ಉಡುಪಿ:ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಸೇತುವೆ ಬಳಿ ರೆಡ್ ಹ್ಯಾಂಡ್ ಆಗಿ ಪೊಲೀಸರು ಬಂಧಿಸಿದ್ದು, 20,11,900 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.

ಕೋಟೆ ಗ್ರಾಮದ ಕಟಪಾಡಿ ಕಾಪು ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು ಉಚ್ಚಿಲ ಬಡಾ ನಿವಾಸಿ ಎನ್.ಎಂ.ಮುಹಮ್ಮದ್ ಮುಕ್ದುಮ್ ಅಲಿ (28) ಬಂಧಿತರು.

ಕಾರ್ಯಾಚರಣೆ ವೇಳೆ 69.127 ಗ್ರಾಂ ತೂಕದ ಎಂಡಿಎಂಎ, ಆರು ಮೊಬೈಲ್ ಫೋನ್, 1,100 ರೂಪಾಯಿ ನಗದು, ಕಾರು, ಲೆನೊವೊ ಲ್ಯಾಪ್‌ಟಾಪ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಪೊಲೀಸರು ಅಂದಾಜು 20,11,900 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

No Comments

Leave A Comment