ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ:ದೇವರ ದರ್ಶನಕ್ಕೆಂದು ಬ೦ದು ದಾ೦ಧಲೆ ನಡೆಸಿದ್ದರೆನ್ನಲಾದ ವ್ಯಕ್ತಿಗಳಿಗೆ ಜಾಮೀನು

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ಬ೦ದು ದಾಂಧಲೆ ನಡೆಸಿದರೆನ್ನಲಾದ ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊ೦ಡಿದ್ದರು.ಬ೦ಧಿತರಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎ೦ದು ಇದೀಗ ಬ೦ದ ವರದಿ ತಿಳಿಸಿದೆ.

ಡಿ.29 ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ವಶಕ್ಕೆ ತೆಗೆದುಕೊಳ್ಳಲಾದ ವ್ಯಕ್ತಿಗಳು.

ಶ್ರೀಕೃಷ್ಣಮಠದ ಒಳಗೆ ಹಾಗೂ ಹೊರಗೆ ತೀವ್ರ ಜನಸಂದಣಿಯಿಂದ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ದೇವರ ದರ್ಶನಕ್ಕೆಂದು ಬಂದಿದ್ದ ಸುಮಾರು 7-8 ಜನ ಅಯ್ಯಪ್ಪ ಮಾಲಾಧಾರಿಗಳು ಎನ್ನಲಾಗಿದೆ.

ರಥಬೀದಿಯಲ್ಲಿ ನಡೆಯುವ ರಥೋತ್ಸವದ ದೇವರ ಉತ್ಸವ ಮೂರ್ತಿ ಪಲ್ಲಕ್ಕಿಯೊಂದಿಗೆ ಕೃಷ್ಣಮಠದ ಮುಂಭಾಗದಿಂದ ಒಳಭಾಗಕ್ಕೆ ಬರುವ ವೇಳೆ ದಾಂಧಲೆ ನಡೆಸಿದ್ದರು. ಅಷ್ಟೇ ಅಲ್ಲದೆ, ಕೃಷ್ಣಮಠದ ಸಿಬ್ಬಂದಿ ಜಗದೀಶ ಎಂಬುವವರ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ.ಜಗದೀಶ್ ಅವರನ್ನು ಎಲ್ಲರೂ ಸೇರಿ ಮೇಲೆತ್ತಿಕೊಂಡು ಶ್ರೀಕೃಷ್ಣ ಮಠದ ಒಳಗಡೆ ಬಂದಿದ್ದು, ಈ ವೇಳೆ ಮಠದ ದಿವಾನ ನಾಗರಾಜ ಆಚಾರ್ಯ ಅವರು ಅಯ್ಯಪ್ಪ ಮಾಲಾಧಾರಿಗಳನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಅವರ ಮೇಲೂ ಹಲ್ಲೆಗೆ ಯತ್ನಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಮಠದಲ್ಲಿ ಭದ್ರತಾ ಕರ್ತವ್ಯ ಹಾಗೂ ಪಿಆರ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ಟೇಬಲ್ ರವೀಂದ್ರ ಗಲಾಟೆ ಮಾಡದಂತೆ ಅಯ್ಯಪ್ಪ ಮಾಲಾಧಾರಿಗಳನ್ನು ಸಮಾಧಾನ ಪಡಿಸಿ ತಡೆಯಲು ಹೋಗಿದ್ದರು. ಈವೇಳೆ ಪೊಲೀಸ್ ಸಿಬ್ಬಂದಿ ಮೇಲು ಹಲ್ಲೆ ಮಾಡಿದ್ದಾರೆ೦ಬ ಆರೋಪ ಕೇಳಿ ಬ೦ದಿತ್ತು.

ಈ ಬಗ್ಗೆ ಕಾನ್ಸ್ಟೇಬಲ್ ರವೀಂದ್ರ ನೀಡಿದ ದೂರಿನನ್ವಯ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 115(2), 121(1), 132, 189(2), 190, ಮತ್ತು 191(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ವಶಕ್ಕೆ ಪಡೆದುಕೊ೦ಡ ವ್ಯಕ್ತಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಅವರಿಗೆ ಷರತ್ತು ಬದ್ದ ಜಾಮೀನು ನೀಡಿದೆ ಎ೦ದು ಮೂಲಗಳಿ೦ದ ತಿಳಿದು ಬ೦ದಿದೆ.

ಸಾರ್ವಜನಿಕರೂ ದೇವರದರ್ಶನಕ್ಕೆ ಗ೦ಟೆಗಟ್ಟಲೆ ಕಾಯಿಸುತ್ತಿದ್ದಾರೆ೦ದು ಭಾರೀ ದು:ಖವ್ಯಕ್ತಪಡಿಸುತ್ತಿದ್ದಾರೆ.

kiniudupi@rediffmail.com

No Comments

Leave A Comment