ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಗದಗ: ಲಾಡ್ಜ್ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣು
ಗದಗ: ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ ಗದಗನ ಪಲ್ಲವಿ ಲಾಡ್ಜ್ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗದಗ ನಗರದ ನಿವಾಸಿಯಾಗಿರುವ ಇಂಜಿನಿಯರ್ ಶಂಕರಗೌಡ ಪಾಟೀಲ್(54) ಅವರು ಇಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದು, ನಗರದ ಪಲ್ಲವಿ ಲಾಡ್ಜ್ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಮೃತ ಇಂಜಿನಿಯರ್ ಸಹೋದರ ಕೃಷ್ಣಗೌಡ ಅವರು, ಇದು ಆತ್ಮಹತ್ಯೆಯಲ್ಲ. ನೇಣು ಹಾಕಿ ಕೊಲೆ ಮಾಡಿದ್ದಾರೆ. ಅವರಿಗೆ ಯಾವುದೇ ಸಾಲ ಇಲ್ಲ. ಸಾಕಷ್ಟು ಆಸ್ತಿ ಇದೆ. ಶಂಕರಗೌಡ ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವನಲ್ಲ ಎಂದು ಹೇಳಿದ್ದಾರೆ.