ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿ: ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಉಡುಪಿ:ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಟಪಾಟಿಯಲ್ಲಿ ಜನವರಿ 1ರಂದು ನಡೆದಿದೆ.
ಕಟಪಾಡಿಯ ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್(34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ
ಜನವರಿ 1 ರಂದು ದೀಪಕ್ ತನ್ನ ಕೋಣೆಯಲ್ಲಿ ಕಬ್ಬಿಣದ ಕೊಕ್ಕೆಯಿಂದ ನೇಣು ಬಿಗಿದುಕೊಂಡಿದ್ದಾನೆ ಎಂದು ವರದಿಯಾಗಿದೆ. ದೀಪಕ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.
ದೀಪಕ್ ಉಡುಪಿಯ ಕಲ್ಸಂಕ ಆಟೋ ಸ್ಟ್ಯಾಂಡ್‌ನಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ತಮ್ಮ ಸರಳ ಸ್ವಭಾವ ಮತ್ತು ಸ್ನೇಹಪರ ನಡವಳಿಕೆಗೆ ಹೆಸರಾಗಿರುವ ದೀಪಕ್ ಅವರು ಅವಿವಾಹಿತರಾಗಿದ್ದರು.
ಇನ್ನು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.