......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!
ಛತ್ತೀಸಗಢದಲ್ಲಿ ಭೀಕರ ಎನ್ಕೌಂಟರ್: ನಾಲ್ವರು ನಕ್ಸಲರ ಹತ್ಯೆ; ಪೊಲೀಸ್ ಸಿಬ್ಬಂದಿ ಸಾವು
ದಂತೇವಾಡ: ಛತ್ತೀಸಗಢದಲ್ಲಿ ಭೀಕರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮತ್ತು ನಾಲ್ಕು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ.
ಛತ್ತೀಸಗಢದ ಬಸ್ತಾರ್ ಪ್ರದೇಶದ ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮದ್ ಅರಣ್ಯದಲ್ಲಿ ಶನಿವಾರ ಸಂಜೆ ಭದ್ರತಾ ಸಿಬ್ಬಂದಿ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ನಾಲ್ವರು ನಕ್ಸಲರು ಹತ್ಯೆಯಾಗಿದ್ದು, ಒಬ್ಬ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಮೃತಪಟ್ಟಿದ್ದಾರೆ.
ಶನಿವಾರ ತಡರಾತ್ರಿ ಗುಂಡಿನ ಚಕಮಕಿ ನಿಂತಿದ್ದು, ಸ್ಥಳದಿಂದ ನಾಲ್ವರು ನಕ್ಸಲೀಯರ ಮೃತದೇಹಗಳು, ಎಕೆ-47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ (SLR) ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂತೆಯೇ ಮೃತ ಪೊಲೀಸ್ ಸಿಬ್ಬಂದಿಯನ್ನು ಸನ್ನು ಕರಮ್ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.