ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಕಾಸರಗೋಡು: ಸಚಿತಾ ರೈ ವಿರುದ್ಧ ದಾಖಲಾದ ಪ್ರಕರಣಗಳ ಸಂಖ್ಯೆ 20ಕ್ಕೆ ಏರಿಕೆ
ಕಾಸರಗೋಡು:ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ವಂಚಿಸಿದ ಪ್ರಕರಣದ ಆರೋಪಿ ಮಾಜಿ ಡಿವೈಎಫ್‌ಐ ಮುಖಂಡೆ, ಅಧ್ಯಾಪಕಿಯಾಗಿರುವ ಪುತ್ತಿಗೆ ಬಾಡೂರಿನ ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಚಿತಾ ರೈ ವಿರುದ್ಧ ದಾಖಲಾದ ಕೇಸುಗಳ ಸಂಖ್ಯೆ 20 ಕ್ಕೇರಿದೆ.
ಬಾಯಾರು ಧರ್ಮತ್ತಡ್ಕ ಕರುವಾಜೆಯ ಮರಿಯಮ್ಮತ್ ಸಪೂರ ನೀಡಿದ ದೂರಿನಂತೆ ಸಚಿತಾ ರೈ ವಿರುದ್ದ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಸರಗೋಡು ಕೇಂದ್ರೀಯ ವಿದ್ಯಾಲಯದಲ್ಲಿ ಸೀನಿಯರ್ ಕ್ಲಾರ್ಕ್ ಉದ್ಯೋಗ ಭರವಸೆ ನೀಡಿ 13,80,000 ರೂ. ವಂಚಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ. 2023 ಡಿ.13 ರಿಂದ 2024 ಎಪ್ರಿಲ್ 30 ರ ವರೆಗಿನ ಕಾಲಾವಧಿಯಲ್ಲಿ ಹಣ ನೀಡಿರುವುದಾಗಿ ದೂರದಾರರು ದೂರಿನಲ್ಲಿ ತಿಳಿಸಿದ್ದಾರೆ.