.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕರ್ನಾಟಕದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಐವರ ಸಾವು

ಬೆಂಗಳೂರು, ಜನವರಿ 06: ಕರ್ನಾಟಕದ  ಪ್ರತ್ಯೇಕ ಮೂರು ಕಡೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಂಬದಹಳ್ಳಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳವನಹಳ್ಳಿಯ ಹರ್ಷಿತ್ ​(24), ಪ್ರವೀಣ್ ​(20) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಹೆದ್ದಾರಿಯ ಸುಳಿಮುರ್ಖಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬಿಹಾರದ ಮೂಲದವರು ಎಂದು ತಿಳಿದುಬಂದಿದೆ. ಮೂವರು ಗಾಯಗೊಂಡಿದ್ದಾರೆ. ಮೂವರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟಿಕೆ ಸಾಮಾನುಗಳು ತುಂಬಿದ್ದ ಲಾರಿ ಸಾಗರದಿಂದ ಹೊನ್ನಾವರ ಕಡೆ ತೆರಳುತ್ತಿತ್ತು. ಈ ವೇಳೆ, ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೊನ್ನಾವರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಜಾದ್ ನಗರದ ಬಳಿ ಬೈಕ್​ ಮತ್ತು ಬೊಲೆರೋ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಮೃತಪಟ್ಟಿದ್ದಾನೆ. ಗುರುಪುರ ಗ್ರಾಮದ ಸುಹೇಲ್ 22 ಮೃತ ಬೈಕ್​ ಸವಾರ ಎಂದು ಗುರುತಿಸಲಾಗಿದೆ. ಸುಹೇಲ್ ಬೈಕ್​ನಲ್ಲಿ ಗುರುಪುರಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಎರಡು ಭಾಗವಾಗಿದೆ. ಬೊಲೆರೋ ವಾಹನ ಚಾಲಕ ಪರಾರಿಯಾಗಿದ್ದಾನೆ. ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment