ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬಿಜಾಪುರದಲ್ಲಿ ನಕ್ಸಲೀಯರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಫೋಟ; 9 ಯೋಧರು ಹುತಾತ್ಮ, ದೇಹಗಳು ಚೆಲ್ಲಾಪಿಲ್ಲಿ
ಬಿಜಾಪುರ: ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶವಾದ ಬಿಜಾಪುರದಲ್ಲಿ ನಕ್ಸಲೀಯರು ದೊಡ್ಡ ಕುಕೃತ್ಯ ಎಸಗಿದ್ದಾರೆ. ಜಂಟಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಸೇನಾ ವಾಹನವನ್ನು ನಕ್ಸಲಿಯರು ಐಇಡಿಯಿಂದ ಸ್ಫೋಟಿಸಿದ್ದಾರೆ. ಸ್ಫೋಟದಲ್ಲಿ 8 ಯೋಧರು ಮತ್ತು ಚಾಲಕ ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಎಲ್ಲಾ ಯೋಧರು ದಾಂತೇವಾಡ ಡಿಆರ್‌ಜಿಯವರು ಎಂದು ಹೇಳಲಾಗಿದೆ. ಈ ಘಟನೆಯನ್ನು ಬಸ್ತಾರ್ ಐಜಿ ಪಿ ಸುಂದರರಾಜ್ ಖಚಿತಪಡಿಸಿದ್ದಾರೆ.
ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ. ದಂತೇವಾಡ, ನಾರಾಯಣಪುರ ಮತ್ತು ಬಿಜಾಪುರದ ಜಂಟಿ ಕಾರ್ಯಾಚರಣೆ ತಂಡವು ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿತ್ತು. ಜನವರಿ 6ರಂದು ಮಧ್ಯಾಹ್ನ 2.15ರ ಸುಮಾರಿಗೆ ಬಿಜಾಪುರ ಜಿಲ್ಲೆಯ ಕುಟ್ರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಲಿ ಗ್ರಾಮದ ಬಳಿ ಮಾವೋವಾದಿಗಳು ಐಇಡಿ ಸ್ಫೋಟಿಸುವ ಮೂಲಕ ಭದ್ರತಾ ಪಡೆಯ ವಾಹನವನ್ನು ಸ್ಫೋಟಿಸಿದ್ದಾರೆ. ಸ್ಫೋಟದಲ್ಲಿ 9ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.