ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ
ಒಟ್ಟಾವೊ: ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
2013ರಿಂದ ಕೆನಡಾದ ಲಿಬರಲ್ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡಿದ್ದಾರೆ.
“…ಪಕ್ಷವು ತನ್ನ ಮುಂದಿನ ನಾಯಕನನ್ನು ಆಯ್ಕೆ ಮಾಡಿದ ನಂತರ ನಾನು ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ…ಕಳೆದ ರಾತ್ರಿ ನಾನು ಲಿಬರಲ್ ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಪ್ರಕ್ರಿಯೆ ಆರಂಭಿಸುವಂತೆ ಕೇಳಿಕೊಂಡಿದ್ದೇನೆ..” ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ.
“ಆಂತರಿಕ ಕಲಹಗಳು” ಮುಂದಿನ ಚುನಾವಣೆಯಲ್ಲಿ “ಅತ್ಯುತ್ತಮ ಆಯ್ಕೆಯಾಗಲು ಸಾಧ್ಯವಿಲ್ಲ” ಎಂದು ಟ್ರೂಡೊ ಹೇಳಿದ್ದು, ಲಿಬರಲ್ ಪಕ್ಷದ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ತಾವು ಪ್ರಧಾನಿಯಾಗಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.
ಟ್ರುಡೊ ಅವರು ತಮ್ಮ ಲಿಬರಲ್ ಪಕ್ಷದೊಳಗೆ ಭಿನ್ನಾಭಿಪ್ರಾಯಗಳನ್ನು ಎದುರಿಸುತ್ತಿರುವ ಕಾರಣ ರಾಜೀನಾಮೆ ನೀಡಿದ್ದಾರೆ.
ಬುಧವಾರ ಒಟ್ಟಾವೊದಲ್ಲಿ ಲಿಬರಲ್ ಪಕ್ಷದ ಕಾಕಸ್ ಸಮಿತಿ ಸಭೆ ನಡೆಯಲಿದೆ. ಅದಕ್ಕೂ ಮುನ್ನ ಟ್ರುಡೋ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕಳೆದ ಒಂದು ತಿಂಗಳಿನಿಂದ ಟ್ರುಡೊ ನೇತೃತ್ವದ ಲಿಬರಲ್ ಪಕ್ಷದ ಸರ್ಕಾರದಲ್ಲಿ ಆಂತರಿಕ ಕಲಹ ಉಂಟಾಗಿದೆ. ಟ್ರುಡೊ ನಾಯಕತ್ವದ ವಿರುದ್ದ ಅವರ ಪಕ್ಷದ ಸಂಸದರೇ ಅಪಸ್ವರ ಎತ್ತಿದ್ದಾರೆ. ಹಣಕಾಸು ಸಚಿವೆ ಕ್ರಿಸ್ಟಿನಾ ಫ್ರಿಲ್ಯಾಂಡ್ ಅವರು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಖಲಿಸ್ತಾನ್ ಪ್ರತ್ಯೇಕವಾದಿಗಳ ವಿಚಾರದಲ್ಲೂ ಟ್ರುಡೊ ನಾಯಕತ್ವ ಮತ್ತು ಭಾರತದ ನಡುವೆ ಸಂಬಂಧ ಹಳಸಿದೆ. ಟ್ರುಡೊ ಸರ್ಕಾರ ಕೆನಡಾದಲ್ಲಿರುವ ಖಲಿಸ್ತಾನಿಗಳ ಪರ ಹೇಳಿಕೆ ನೀಡುತ್ತಿರುವುದನ್ನು ಭಾರತ ಖಂಡಿಸಿದೆ.