ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಲಿರುವ ನಕ್ಸಲರು
(ನಕ್ಸಲ್ ಶರಣಾಗತಿ ಸಮಿತಿಗೆ ಹೊಸ ವರ್ಷದ ಶುಭಾಶಯದ ಕೖ ಬರಹದ ಗ್ರೀಟಿಂಗ್ ನೀಡಿ ಸ್ವಾಗತಿಸಿದ ಮುಂಡಗಾರು ಲತಾ)
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಶರಣಾಗಬೇಕಿದ್ದ ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತರಾಗಲಿದ್ದಾರೆ.
ಆರು ಜನ ನಕ್ಸಲರ ಪೋಷಕರು ಚಿಕ್ಕಮಗಳೂರು ಜಿಲ್ಲಾಡಳಿದ ಮುಂದೆ ತಮ್ಮವರನ್ನು ನೋಡಲು ಕಾತುರದಿಂದ ಕಾದಿದ್ದರು. ಆದರೆ, ದಿಢೀರ್ ಬದಲಾವಣೆ ಗೊಂಡಿದ್ದು, ಪೋಷಕರನ್ನು ಬೆಂಗಳೂರಿಗೆ ಕಳಿಸಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಲಿದ್ದಾರೆ. ಬೆಂಗಳೂರಿಗೆ ತೆರಳುವ ವಿಚಾರವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡ ಕೆ.ಎಲ್.ಅಶೋಕ್ ತಿಳಿಸಿದ್ದಾರೆ.