....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಹಿರಿಯಡ್ಕ: ಬೈಕ್ ಮರಕ್ಕೆ ಢಿಕ್ಕಿ : ಯುವಕ ಮೃತ್ಯು

ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಸಮೀಪ ನಡೆದಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಸಂತೋಷ್(28) ಎಂದು ತಿಳಿದು ಬಂದಿದೆ.

ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂತೋಷ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸಂತೋಷ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹಿರಿಯಡ್ಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment