ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಪಡುಬಿದ್ರೆ :ಸಾಲದ ಚಿಂತೆ-ಯುವಕ ಆತ್ಮಹತ್ಯೆ
ಪಡುಬಿದ್ರೆ: ಸಾಲದ ಚಿಂತೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಸಾಲದ ಚಿಂತೆಯಲ್ಲಿದ್ದರೆನ್ನಲಾಗಿದೆ.
ಮನೆಯಲ್ಲಿದ್ದ ಸಮಯದಲ್ಲಿ ಸಾಲ ಕೊಟ್ಟ ಬ್ಯಾಂಕ್ ನವರು, ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರೆನ್ನಲಾಗಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದರು. ಬುಧವಾರ ಬೆಡ್ ರೂಂನಲ್ಲಿ ಫ್ಯಾನಗೆ ಚೂಡಿದಾರದ ವೇಲಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ