ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಓಂ ಶಕ್ತಿ ದರ್ಶನ ಪಡೆದು ವಾಪಸಾಗುವಾಗ ಅಪಘಾತ: ಕೋಲಾರದ ನಾಲ್ವರ ಸಾವು

ಕೋಲಾರ, ಜನವರಿ 09: ತಮಿಳುನಾಡಿನ  ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರದ  ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೆಎಸ್​ಆರ್​ಟಿಸಿ ಬಸ್  ಹಾಗೂ ಕರ್ನಾಟಕದ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ನಲ್ಲೂರು ಗ್ರಾಮದ ಸರಸ್ವತಮ್ಮ ಸ್ಥಿತಿ ಗಂಭೀರವಾಗಿದೆ.

ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಹೋಗಿ ವಾಪಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು.

ಬುಧವಾರ ರಾತ್ರಿ ತಮಿಳುನಾಡಿನ ರಾಣಿಪೇಟೆ ಬಳಿ ಕೆಎಸ್​ಆರ್​ಟಿಸಿ ಮತ್ತು ಕ್ಯಾಂಟರ್​ ನಡುವೆ ಅಪಘಾತ ಸಂಭವಿಸಿದೆ. ನಾಲ್ವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

No Comments

Leave A Comment