ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
‘ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ’
ಬೆಂಗಳೂರು, ಜನವರಿ 09: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಿರುವ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗಾಗಿ ನೇಮಕಾತಿ ಆದೇಶವನ್ನು ನೀಡಲಾಗುವುದೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು.
ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ರವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಐ.ಪಿ.ಡಿ ಸಾಲಪ್ಪ ರವರು 1929ರಲ್ಲಿ ಜನಿಸಿದ್ದು, ಭಾರತ ಸ್ವಾತಂತ್ರ್ಯದ ಹೋರಾಟದಲ್ಲಿ ಸಕ್ರಿಯವಾಗಿ ಹೋರಾಟ ನಡೆಸಿಕೊಂಡು ಬಂದವರು. ಬಿನ್ನಿಪೇಟೆಯಿಂದ ಶಾಸಕರಾಗಿ ಕಾರ್ಯನಿರ್ವಹಿಸಿದವರು. ಪೌರಕಾರ್ಮಿಕರ ಜೀವನದ ಸ್ಥಿತಿಗತಿಗಳನ್ನು ಬಹಳ ಹತ್ತಿರದಿಂದ ತಿಳಿದಿದ್ದ ಸಾಲಪ್ಪನವರು 36 ಅಂಶಗಳ ವರದಿಯನ್ನು ಸರ್ಕಾರಕ್ಕೆ ನೀಡಿದರು. ಐ.ಪಿ.ಡಿ.ಸಾಲಪ್ಪ ವರದಿಯ ಅಧಾರದ ಮೇಲೆ ಪೌರಕಾರ್ಮಿಕರಿಗೆ ಎಲ್ಲಾ ಸೌಲಭ್ಯಗಳು ಸಿಗುತ್ತಿದ್ದು, ಸಾಲಪ್ಪ ರವರು ನಮ್ಮ ಸಮಾಜಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.
ಮನೆ-ಮನೆಯಿಂದ ಸಂಗ್ರಹಿಸುವ ಕಸದ ಪದ್ದತಿ ಸರಿಯಾಗಿ ಜಾರಿಯಾಗಬೇಕಿದೆ. ನಾಗರೀಕರು ರಸ್ತೆ ಬದಿ ಕಸ ಬಿಸಾಡುತ್ತಾರೆ, ಅದನ್ನು ಪೌರಕಾರ್ಮಿಕರೇ ಸ್ವಚ್ಛಗೊಳಿಸಬೇಕಿದೆ. ಮನೆ-ಮನೆಯಿಂದ ಕಸ ಸಂಗ್ರಹಿಸುವ ಪದ್ದತಿ ಸರಿಯಾಗಿ ಜಾರಿಯಾದರೆ ಬಹುತೇಖ ಸಮಸ್ಯೆ ನಿವಾರಣೆಯಾಗಲಿದೆ ಎಂದು ಹೇಳಿದರು. ತಂತ್ರಜ್ಞಾನ ಎಷ್ಟೇ ಬೆಳೆದಿದ್ದರೂ ಕೂಡಾ ಪೌರಕಾರ್ಮಿಕರು ಇನ್ನು ಪೊರಕೆಯಿಂದಲೇ ಬೀದಿಗಳನ್ನು ಸ್ವಚ್ಛ ಮಾಡುತ್ತಿದ್ದಾರೆ. ಅದನ್ನು ನಾವು ಬದಲಿಸಲು ಮುಂದಾಗಲಾಗುತ್ತಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಶೀಘ್ರ ಯಾಂತ್ರಿಕೃತ ಯಂತ್ರಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತರಾದ ಪ್ರತಿಭಾ, ಲಕ್ಷ್ಮಿದೇವಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.