ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಎಲ್ಲಾ ಪಕ್ಷದ ಶಾಸಕರಿಗೆ ಮಕರ ಸಂಕ್ರಾಂತಿ ಗಿಫ್ಟ್: ತಲಾ 10 ಕೋಟಿ ಅನುದಾನ ಘೋಷಿಸಿದ CM ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಕರ ಸಂಕ್ರಾಂತಿಗೆ ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾನ ಘೋಷಿಸಿದ್ದಾರೆ.

ಕಳೆದ ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಿಎಲ್ ಪಿ ಸಭೆಯಲ್ಲಿ ಶಾಸಕರಿಗೆ ಅನುದಾನವನ್ನು ನೀಡುವ ಘೋಷಣೆ ಮಾಡಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ಅನುದಾನವನ್ನು ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಶಾಸಕರಿಗೂ 10 ಕೋಟಿ ಅನುದಾನ ಕೊಡುತ್ತಿರುವುದಾಗಿ ಘೋಷಿಸಿದರು.

ಸೋಮವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಅನುದಾನ ಕೊರತೆ ಬಗ್ಗೆ ಪ್ರಸ್ತಾಪಮಾಡಿದರು. ಆಗ ಮಾತನಾಡಿದ ಸಿದ್ದರಾಮಯ್ಯ, ‘ಭಾನುವಾರವಷ್ಟೇ ಕಡತಕ್ಕೆ ಸಹಿ ಹಾಕಿದ್ದೇನೆ. ಕಾಂಗ್ರೆಸ್ ಶಾಸಕರು ಮಾತ್ರವಲ್ಲ ಎಲ್ಲಾ ಶಾಸಕರಿಗೂ ತಲಾ 10 ಕೋಟಿ ರು. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೆಲ ಶಾಸಕರು, 10 ಕೋಟಿ ರು. ಅನುದಾನದಿಂದ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಮಾಡಲು ಆಗುವುದಿಲ್ಲ. ಹೆಚ್ಚುವರಿ ಅನುದಾನಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟರು. ಬೇಡಿಕೆಗೆ ಸ್ಪಂದಿಸಿದ ಸಿದ್ದರಾಮಯ್ಯ, ಸದ್ಯಕ್ಕೆ 10 ಕೋಟಿ ರು. ಅನುದಾನ ಬಳಕೆ ಮಾಡಿ. ಹೆಚ್ಚುವರಿ ಅನುದಾನಬೇಕಿರುವವರು ಫೆಬ್ರವರಿ ತಿಂಗಳಲ್ಲಿ ಪ್ರಸ್ತಾವನೆ ಸಲ್ಲಿಸಿ. 2025-26ನೇ ಸಾಲಿನ ಆಯವ್ಯಯದಲ್ಲಿ ಅನುದಾನಕ್ಕೆ ಅವಕಾಶ ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು ಎಂದು ತಿಳಿದುಬಂದಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರು ಕೈ ಶಾಸಕರು, ಸಚಿವರಿಗೆ ಬಹಿರಂಗ ಹೇಳಿಕೆ ನೀಡದಂತೆ ತಾಕೀತು ಮಾಡಿದರು. ಏನೇ ಗೊಂದಲಗಳಿದ್ದರೂ ನಾಲ್ಕು ಗೋಡೆಗಳ ಮಧ್ಯೆ, ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸುವಂತೆ ಸೂಚಿಸಿದರು. ಸುರ್ಜೆವಾಲ ಮಾತಿಗೆ ಸಿಎಂ ದನಿಗೂಡಿಸಿದರು. ಎಲ್ಲವೂ ಹೈಕಮಾಂಡ್​​ಗ್ ಗೆ ಬಿಟ್ಟ ವಿಚಾರ. ಅದರಂತೆ ಎಲ್ಲರೂ ನಡೆಯಬೇಕು ಎಂದು ಹೇಳಿದರು.

kiniudupi@rediffmail.com

No Comments

Leave A Comment