ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ನವದೆಹಲಿ: ಕೇಂದ್ರ ಸಚಿವ ಕಿಶನ್ ರೆಡ್ಡಿ ನಿವಾಸದಲ್ಲಿ ಪ್ರಧಾನಿ ಮೋದಿ ಸಂಕ್ರಾಂತಿ ಆಚರಣೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾತ್ರಿ ಕೇಂದ್ರ ಸಚಿವರು ಆಗಿರುವ ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಅವರ ನಿವಾಸದಲ್ಲಿ ಸಂಕ್ರಾಂತಿ ಮತ್ತು ಪೊಂಗಲ್ ಆಚರಣೆಯಲ್ಲಿ ಪಾಲ್ಗೊಂಡರು. ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಅಲಂಕೃತ ಗೋವಿಗೆ ಬಾಳೆ ಹಣ್ಣು ತಿನ್ನಿಸುವ ಮೂಲಕ ಜನತೆಗೆ ಸಂಕ್ರಾಂತಿ ಹಬ್ಬದ ಮಹತ್ವವನ್ನು ಪ್ರಧಾನಿ ಮೋದಿ ತಿಳಿಸಿದರು. ಈ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಅನೇಕ ಸಚಿವರು ಸೇರಿದಂತೆ ತೆಲುಗಿನ ಖ್ಯಾತ ನಟ ಚಿರಂಜೀವಿ, ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಉಪಸ್ಥಿತರಿದ್ದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಭಾರತದಾದ್ಯಂತ ಜನರು ಸಂಕ್ರಾಂತಿ ಮತ್ತು ಪೊಂಗಲ್ ಹಬ್ಬವನ್ನು ಅತ್ಯಂತ ಉತ್ಸಾಹದಿಂದ ಆಚರಿಸುತ್ತಾರೆ. ಇದು ನಮ್ಮ ಸಂಸ್ಕೃತಿಯ ಕೃಷಿ ಸಂಪ್ರದಾಯಗಳಲ್ಲಿ ಆಳವಾಗಿ ಬೇರೂರಿರುವ ಕೃತಜ್ಞತೆ, ಸಮೃದ್ಧಿ ಮತ್ತು ಹೊಸತನದ ಆಚರಣೆಯಾಗಿದೆ ಎಂದಿದ್ದಾರೆ.
ಎಲ್ಲರಿಗೂ ಸಂಕ್ರಾಂತಿ ಮತ್ತು ಪೊಂಗಲ್ ಹಬ್ಬದ ಶುಭಾಶಯಗಳು. ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧ ಸುಗ್ಗಿಯ ಋತುವನ್ನು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.