ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ

ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ

ಬೆಂಗಳೂರು, ಜನವರಿ 14: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ.

ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ. ಸದ್ಯ, ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕ್​ನನ್ನು ಬಂಧಿಸಿದ್ದಾರೆ. ಇನ್ನು, ಅಭಿಷೇಕ್​ ಕುಮಾರ್​ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದನು.

No Comments

Leave A Comment