ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ; ತಂಡಕ್ಕೆ ಮರಳಿದ ಮುಹಮ್ಮದ್ ಶಮಿ

ಚಾಂಪಿಯನ್ಸ್ ಟ್ರೋಫಿ ಟೂರ್ನಿ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್​ನೆಸ್ ಸಮಸ್ಯೆಗೆ ಒಳಗಾಗಿದ್ದ ಜಸ್​ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿದೆ. ಇದಾಗ್ಯೂ ಅವರು ಇಡೀ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ.

ಏಕೆಂದರೆ ಬೆನ್ನು ನೋವಿನಿಂದ ಬಳಲುತ್ತಿರುವ ಜಸ್​ಪ್ರೀತ್ ಬುಮ್ರಾಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಮೊದಲ ಮೂರು ಪಂದ್ಯಗಳಲ್ಲಿ ಬುಮ್ರಾ ಕಣಕ್ಕಿಳಿಯದಿದ್ದರೂ ಅಚ್ಚರಿಪಡಬೇಕಿಲ್ಲ.

ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಅವರನ್ನು ಈ ಬಾರಿ ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಅರ್ಷದೀಪ್ ಸಿಂಗ್​ಗೆ ಸ್ಥಾನ ನೀಡಲಾಗಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮೊಹಮ್ಮದ್ ಶಮಿ ಕಂಬ್ಯಾಕ್ ಮಾಡಲಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಶಮಿ ಅವರನ್ನು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿತ್ತು. ಇದೀಗ ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಚಾಂಪಿಯನ್ಸ್​ ಟ್ರೋಫಿಗಾಗಿಯೂ ಮೊಹಮ್ಮದ್ ಶಮಿ ಅವರಿಗೆ ಸ್ಥಾನ ನೀಡಲಾಗಿದೆ.

ಚಾಂಪಿಯನ್ಸ್ ಟ್ರೋಫಿ/ಇಂಗ್ಲೆಂಡ್ ಸರಣಿಗೆ ಭಾರತ ತಂಡ:
ಚಾಂಪಿಯನ್ಸ್ ಟ್ರೋಫಿಗೆ ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ರವೀಂದ್ರ ಜಡೇಜಾ.

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪಾನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್.

No Comments

Leave A Comment