ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ ಘೋಷಣೆ
ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ.
ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಪರಿಣಾಮ 9 ಮಂದಿ ವ್ಯಾಪಾರಿಗಳು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಜನರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.