ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಭೋಪಾಲ್: ಸೈಫ್ ಅಲಿ ಖಾನ್ ಕುಟುಂಬದ 15,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ?
ಭೋಪಾಲ್: ಮಧ್ಯಪ್ರದೇಶದಲ್ಲಿ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅವರು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕೊಹೆಫಿಜಾ ಪ್ರದೇಶದಿಂದ ಭೋಪಾಲ್‌ನ ಚಿಕ್ಲೋಡ್‌ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ವಿಸ್ತರಿಸಿದೆ. ಇದನ್ನು ಶತ್ರು ಆಸ್ತಿ ಎಂದು 2014ರಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು. ಈ ಆಸ್ತಿ ಮೇಲೆ ಪಟೌಡಿ ಕುಟುಂಬದ ಉತ್ತರಾಧಿಕಾರಿಗೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಸ್ಪಷ್ಟಪಡಿಸಿ ನೋಟಿಸ್ ಜಾರಿ ಮಾಡಲಾಗಿತ್ತು. ಸರ್ಕಾರ ಈ ಧೋರಣೆಯನ್ನು ಪ್ರಶ್ನಿಸಿ ಸೈಫ್ ಅಲಿ ಖಾನ್ ಅವರು 2015ರಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಈ ನೋಟಿಸ್ ವಿರುದ್ಧ ಸೈಫ್ ಅಲಿ ಖಾನ್ ಪಟೌಡಿ ಕುಟುಂಬ ಸಲ್ಲಿಸಿದ್ದ ಅರ್ಜಿಯನ್ನು ಮಧ್ಯಪ್ರದೇಶದ ಹೈಕೋರ್ಟ್ ವಜಾಗೊಳಿಸಿದೆ.
ಈ ಆಸ್ತಿಗಳ ಮೇಲೆ 2015 ರಲ್ಲಿ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್ ತೆಗೆದುಹಾಕಿದೆ. ಇದರಿಂದಾಗಿ 1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವ ಸಾಧ್ಯತೆಯಿದೆ. 1968ರ ಶತ್ರು ಆಸ್ತಿ ಕಾಯ್ದೆಯ ಪ್ರಕಾರ, 1947 ರ ವಿಭಜನೆಯ ನಂತರ ಪಾಕಿಸ್ತಾನಕ್ಕೆ ವಲಸೆ ಹೋದ ವ್ಯಕ್ತಿಗಳ ಒಡೆತನದ ಆಸ್ತಿಯನ್ನು ಕೇಂದ್ರ ಸರ್ಕಾರವು ಹಕ್ಕು ಸಾಧಿಸಬಹುದಾಗಿದೆ.
ಡಿ. 13 ರಂದು ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್, 2017ರ ತಿದ್ದುಪಡಿ ಮಾಡಿದ ಶತ್ರು ಆಸ್ತಿ ಕಾಯ್ದೆ ಅಡಿ ಶಾಸನಬದ್ಧ ಪರಿಹಾರವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ದಿನಗಳಲ್ಲಿ ಪ್ರಾತಿನಿಧ್ಯ ಸಲ್ಲಿಸಬೇಕೆಂದು ಪಟೌಡಿ ಕುಟುಂಬಕ್ಕೆ ಸೂಚಿಸಿತ್ತು. ಇಂದಿನಿಂದ ಈ ಆದೇಶಕ್ಕೆ ಸಂಬಂಧಿಸಿಂತೆ 30 ದಿನಗಳ ಒಳಗಡೆ ಮೇಲ್ಮನವಿ ಸಲ್ಲಿಸದಿದ್ದರೆ ಕೋರ್ಟ್ ಆದೇಶ ಪ್ರಕಟಿಸುವುದಿಲ್ಲ. ಒಂದು ವೇಳೆ ಸಲ್ಲಿಸದಿದ್ದರೆ ಕೋರ್ಟ್ ತನ್ನದೇ ಆದ ಅರ್ಹತೆಯ ಆಧಾರದ ಮೇಲೆ ಮೇಲ್ಮನವಿಯನ್ನು ಪರಿಗಣಿಸುತ್ತದೆ ಎಂದು ಹೇಳಿತ್ತು. ಇಲ್ಲಿಯವರೆಗೆ ಪಟೌಡಿ ಕುಟುಂಬಸ್ಥರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರಾ ಎಂಬುದರ ಬಗ್ಗೆ ಮಾಹಿತಿಯಿಲ್ಲ.
ಭಾರತ ಸ್ವಾತಂತ್ರ್ಯ ಪಡೆಯುವಾಗ 1947 ರಲ್ಲಿ ಭೋಪಾಲ್ ರಾಜಪ್ರಭುತ್ವದ ರಾಜ್ಯವಾಗಿತ್ತು ಮತ್ತು ನವಾಬ್ ಹಮೀದುಲ್ಲಾ ಖಾನ್ ಅದರ ಕೊನೆಯ ನವಾಬ್ ಆಗಿದ್ದರು. ನವಾಬ್ ಹಮೀದುಲ್ಲಾ ಖಾನ್ ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದರು ಅವರಲ್ಲಿ ಅಬಿದಾ ಸುಲ್ತಾನ್ 1950 ರಲ್ಲಿ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು.
1960ರ ದಶಕದವರೆಗೂ ಬದುಕಿದ್ದ ಹಮೀದುಲ್ಲಾ ಅವರು ತಮ್ಮ ಇನ್ನೊಬ್ಬ ಪುತ್ರಿ, ಮನ್ಸೂರ್ ಅಲಿ ಖಾನ್ ಪಟೌಡಿ ಅವರ ತಾಯಿ ಸಜೀದಾ ಸುಲ್ತಾನಾ ಅವರನ್ನು ತಮ್ಮ ಆಸ್ತಿಯ ಉತ್ತರಾಧಿಕಾರಿ ಎಂದು ಘೋಷಿಸಿದ್ದರು. ಸಾಜಿದಾ ಸುಲ್ತಾನ್ ಭಾರತದಲ್ಲಿಯೇ ಇದ್ದು ಇಫ್ತಿಕರ್ ಅಲಿ ಖಾನ್ ಪಟೌಡಿ( ಸೈಫ್ ಅಲಿಖಾನ್ ಅವರ ಅಜ್ಜ, ಮನ್ಸೂರ್ ಅಲಿಖಾನ್ ಅವರ ತಂದೆ) ಅವರನ್ನು ವಿವಾಹವಾದರು. ನ್ಯಾಯಾಲಯವು ಸಾಜಿದಾ ಸುಲ್ತಾನ್ ಅವರನ್ನು ಕಾನೂನುಬದ್ಧ ಉತ್ತರಾಧಿಕಾರಿಯಾಗಿ ಗುರುತಿಸಿತ್ತು ಮತ್ತು ಸೈಫ್ ಅಲಿ ಖಾನ್ ಆಸ್ತಿಯಲ್ಲಿ ಪಾಲನ್ನು ಪಡೆದರು.
2016ರಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಹೊಸ ಕಾಯ್ದೆಯಲ್ಲಿ ಭಾರತೀಯ ಪ್ರಜೆಗೆ ಅನ್ವಯವಾಗುವುದಿಲ್ಲ ಎಂಬ ಸಾಲುಗಳನ್ನು ತೆಗೆದುಹಾಕಲಾಗಿದೆ. ಅಷ್ಟೇ ಅಲ್ಲದೇ ಕಾಯ್ದೆಯನ್ನು ಪೂರ್ವಾನ್ವಯವಾಗುವಂತೆ ಜಾರಿ ಮಾಡಲಾಗಿದೆ. ಆದ್ದರಿಂದ ಹಿಂದೆ ಇಂಥ ಆಸ್ತಿಗಳು ಮಾರಾಟವಾಗಿದ್ದರೆ ಆ ಎಲ್ಲಾ ವ್ಯವಹಾರಗಳು ರದ್ದಾಗುತ್ತವೆ. ಕಾಯ್ದೆಯ ತಿದ್ದುಪಡಿಯ ಬಳಿಕ ಸರ್ಕಾರವು ಪಟೌಡಿ ಹಸ್ತಾಂತರವನ್ನೂ ರದ್ದುಪಡಿಸಿ, ಅವರ ಆಸ್ತಿಯನ್ನು ‘ಶತ್ರುವಿನ ಸ್ವತ್ತು’ ಎಂದು ಹೇಳಿತ್ತು. ಈ ಪ್ರಕರಣದಲ್ಲಿ ಅಬಿದಾ ಸುಲ್ತಾನ್ ಅವರು ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರಿಂದ ಸರ್ಕಾರ ಪಟೌಡಿ ಆಸ್ತಿ ʼಶತ್ರು ಆಸ್ತಿʼ ಎಂದು ದೃಢೀಕರಿಸಲು ಸಾಧ್ಯವಾಯಿತು.
ಈ ಪ್ರಕರಣದಲ್ಲಿ ಕಕ್ಷಿದಾರರಾಗಿ ಸೈಫ್ ಅಲಿ ಖಾನ್, ಅವರ ತಾಯಿ ಶರ್ಮಿಳಾ ಟ್ಯಾಗೋರ್, ಸಹೋದರಿಯರಾದ ಸೋಹಾ ಅಲಿ ಖಾನ್ ಮತ್ತು ಸಬಾ ಅಲಿ ಖಾನ್ ಮತ್ತು ಮನ್ಸೂರ್ ಅಲಿ ಖಾನ್ ಪಟೌಡಿ ಅವರ ಸಹೋದರಿ ಸಬಿಹಾ ಸುಲ್ತಾನ್, ಮತ್ತು ಕೇಂದ್ರ ಸರ್ಕಾರ ಇತರರು ಇದ್ದಾರೆ.
ಸೈಫ್ ಅಲಿ ಖಾನ್ ತಮ್ಮ ಬಾಲ್ಯವನ್ನು ಕಳೆದ ಫ್ಲ್ಯಾಗ್ ಸ್ಟಾಫ್ ಹೌಸ್, ನೂರ್-ಉಸ್-ಸಬಾ ಅರಮನೆ, ದಾರ್-ಉಸ್-ಸಲಾಮ್, ಹಬೀಬಿಯ ಬಂಗಲೆ, ಅಹಮದಾಬಾದ್ ಅರಮನೆ, ಕೊಹೆಫಿಜಾ ಆಸ್ತಿ ಪರಿಶೀಲನೆಯಲ್ಲಿರುವ ಪ್ರಮುಖ ಆಸ್ತಿಗಳಾಗಿವೆ.