ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!
ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಜೆಡಿಯು
ಇಂಫಾಲ್: ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷವು ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದೆ.
ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ನಿತೀಶ್ ಕುಮಾರ್ ನೇತೃತ್ವದ ಪಕ್ಷ ಬುಧವಾರ ತಿಳಿಸಿದೆ.
ಆದಾಗ್ಯೂ, ಜೆಡಿಯು ಬೆಂಬಲ ಹಿಂಪಡೆದರೂ ಬಿರೇನ್ ಸಿಂಗ್ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ ಬಿಜೆಪಿ 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 37 ಸ್ಥಾನಗಳನ್ನು ಹೊಂದಿದೆ ಮತ್ತು ನಾಗಾ ಪೀಪಲ್ಸ್ ಫ್ರಂಟ್‌ನ ಐದು ಶಾಸಕರು ಹಾಗೂ ಮೂವರು ಪಕ್ಷೇತರರ ಬೆಂಬಲ ಹೊಂದಿದೆ.
ಜೆಡಿಯು ರಾಜ್ಯಾಧ್ಯಕ್ಷ ಕ್ಷ ಬಿರೇನ್ ಸಿಂಗ್ ಅವರು ರಾಜ್ಯಪಾಲ ಭಲ್ಲಾ ಅವರಿಗೆ ಬರೆದ ಪತ್ರದಲ್ಲಿ, “ಫೆಬ್ರವರಿ/ಮಾರ್ಚ್ 2022 ರಲ್ಲಿ ನಡೆದ ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ, ಜೆಡಿಯುನ ಆರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಕೆಲವು ತಿಂಗಳುಗಳ ನಂತರ, ಜೆಡಿಯುನ ಐದು ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದು, ಈ ಐದು ಶಾಸಕರ ವಿಚಾರಣೆ ಸ್ಪೀಕರ್ ಮುಂದೆ ಬಾಕಿ ಇದೆ” ಎಂದು ಹೇಳಿದ್ದಾರೆ.