ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಜೈಶಂಕರ್ ಜೊತೆ US ಸೆಕ್ರೆಟರಿ ಆಫ್ ಸ್ಟೇಟ್ ರೂಬಿಯೊ ಚೊಚ್ಚಲ ಸಭೆ: ವಲಸಿಗರ ಸಮಸ್ಯೆ ಬಗೆಹರಿಸುವ ಇಂಗಿತ!
ವಾಷಿಂಗ್ಟನ್: ಅಮೆರಿಕದ ನೂತನ ಸೆಕ್ರೆಟರಿ ಆಫ್ ಸ್ಟೇಟ್ ಆಗಿ ನೇಮಕವಾಗಿರುವ ಮಾರ್ಕೊ ರೂಬಿಯೊ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜೊತೆಗೆ ನಡೆಸಿದ ಮೊದಲ ಸಭೆಯಲ್ಲಿ ಭಾರತದೊಂದಿಗೆ ಆರ್ಥಿಕ ಬಾಂಧವ್ಯವನ್ನು ಮುಂದುವರೆಸಲು ಮತ್ತು ಅನಿಯಮಿತ ವಲಸೆ ಸಮಸ್ಯೆ ಪರಿಹರಿಸಲು ಟ್ರಂಪ್ ಸರ್ಕಾರ ಒಲವು ಹೊಂದಿದೆ ಎಂದು ಅಮೆರಿಕದ ಉನ್ನತ ರಾಜತಾಂತ್ರಿಕರ ವಕ್ತಾರರು ಮಂಗಳವಾರ ತಿಳಿಸಿದ್ದಾರೆ.
53 ವರ್ಷದ ರುಬಿಯೊ ಭಾರತದ ತಮ್ಮ ಸಹವರ್ತಿ ಜೈಶಂಕರ್ ಜೊತೆಗೆ ನಡೆಸಿದ ಸಭೆಯಲ್ಲಿ ಟ್ರಂಪ್ ಆಡಳಿತ ಭಾರತದೊಂದಿಗೆ ಬಾಂಧವ್ಯವನ್ನು ಬಲಪಡಿಸಲು ನೀಡುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ. ಕ್ವಾಡ್ ಸಚಿವರ ಸಭೆಯ ನಂತರ ವಿದೇಶಾಂಗ ಇಲಾಖೆಯ ಪ್ರಧಾನ ಕಚೇರಿಯಲ್ಲಿ 70 ವರ್ಷದ ಜೈಶಂಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಇಲಾಖೆಯ ವಕ್ತಾರ ಟಮ್ಮಿ ಬ್ರೂಸ್, ಭಾರತದೊಂದಿಗೆ ಆರ್ಥಿಕ ಸಂಬಂಧಗಳನ್ನು ಹೆಚ್ಚಿಸಲು ಮತ್ತು ಅನಿಯಮಿತ ವಲಸೆಗೆ ಸಂಬಂಧಿಸಿದ ಕಳವಳಗಳನ್ನು ಪರಿಹರಿಸಲು ಭಾರತದೊಂದಿಗೆ ಕೆಲಸ ಮಾಡುವ ಇಂಗಿತವನ್ನು ರೂಬಿಯೊ ವ್ಯಕ್ತಪಡಿಸಿದ್ದಾರೆ.
ಭಾರತ-ಯುಎಸ್ ಪಾಲುದಾರಿಕೆಯನ್ನು ಬಲಪಡಿಸಲು ಬದ್ಧತೆಯನ್ನು ಮುಂದುವರೆಸಲು ಉಭಯ ರಾಷ್ಟ್ರಗಳ ನಾಯಕರು ದೃಢಪಡಿಸಿದ್ದಾರೆ. ಅಲ್ಲದೇ ಪ್ರಾದೇಶಿಕ ಸಮಸ್ಯೆಗಳು ಮತ್ತು ಯುಎಸ್-ಭಾರತ ಸಂಬಂಧವನ್ನು ಇನ್ನಷ್ಟು ಗಾಢವಾಗಿಸುವ ಅವಕಾಶಗಳು ಸೇರಿದಂತೆ ವ್ಯಾಪಕವಾದ ಚರ್ಚೆ ನಡೆಸಿದ್ದಾರೆ ಎಂದು ಬ್ರೂಸ್ ಹೇಳಿದ್ದಾರೆ.
ಸಭೆಯ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ರಾಜ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ರೂಬಿಯೊ ಅವರನ್ನು ಭೇಟಿಯಾದದ್ದು, ಸಂತೋಷವಾಗಿದೆ. ದ್ವಿಪಕ್ಷೀಯ ಸಭೆಯಲ್ಲಿ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆದಿದೆ. ಕಾರ್ಯತಂತ್ರದ ಸಹಕಾರವನ್ನು ಮುಂದುವರಿಸಲು ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.