.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ವಿದ್ಯಾರ್ಥಿಗೆ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ : ಮೂವರ ಬಂಧನ

ಉಡುಪಿ: ನಗರದಲ್ಲಿ ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬ‌ಂಧಿತ ಆರೋಪಿಗಳು ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಎಂದು ಗುರುತಿಸಲಾಗಿದೆ.

ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು ಯುಕೆ ಯಲ್ಲಿ ಮಾಡಲು ಬಯಸಿದ್ದರು. ಇವರು ದುಬೈಗೆ ತೆರಳಿ ಅಫ್ತಾಬ್ ನನ್ನು ಭೇಟಿ ಮಾಡಿದ್ದು, ನಂತರ UK ಯಲ್ಲಿ M.PH ವಿಧ್ಯಾಭ್ಯಾಸಕ್ಕಾಗಿ ಸೀಟಿಗೆ 18 ಲಕ್ಷಕ್ಕೆ ಇಬ್ಬರ ನಡುವೆ ಒಪ್ಪಂದವಾಗಿತ್ತು.ಅಫ್ತಾಬ್ ವಿದ್ಯಾರ್ಥಿಗೆ ಸೀಟನ್ನು ಖಾಯಂ ಮಾಡಲು ಮೊದಲಿಗೆ 8.5 ಲಕ್ಷವನ್ನು ನೀಡುವಂತೆ ಕೇಳಿದ್ದ. ಅದನ್ನು ವಿದ್ಯಾರ್ಥಿ ನೀಡಿದ್ದ. ನಂತರ ಆರೋಪಿಗಳು ವಿದ್ಯಾರ್ಥಿಯ ಕರೆಯನ್ನು ಸ್ವೀಕರಿಸದೇ ಯುಕೆಯಲ್ಲಿ M.PH ವಿಧ್ಯಾಭ್ಯಾಸಕ್ಕೆ ಸೀಟನ್ನೂ ಕೊಡಿಸದೇ ವಂಚಿಸಿದ್ದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

No Comments

Leave A Comment