ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಅನೈತಿಕ ಚಟುವಟಿಕೆ ಆರೋಪ: ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ
ಮಂಗಳೂರು, ಜನವರಿ 23: ಅನೈತಿಕ ಚಟುವಟಿಕೆ ಆರೋಪಿಸಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ಸಂಘಟನೆಯಿಂದ ದಾಳಿ ಮಾಡಿರುವಂತಹ ಘಟನೆ ಬಿಜೈ ಕೆಎಸ್ಆರ್ ಟಿಸಿ ಬಳಿ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ನಲ್ಲಿ ನಡೆದಿದೆ. ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಲಾಗಿದೆ.
ಮಸಾಜ್ ಸೆಂಟರ್ನ ಗಾಜುಗಳನ್ನು ಪುಡಿಗೈದು ರಾಮ ಸೇನಾ ಸಂಘಟೆನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ನಗರದಾದ್ಯಂತ ಇರುವ ಮಸಾಜ್ ಸೆಂಟರ್ಗಳನ್ನು ಮುಚ್ಚುವಂತೆ ರಾಮ ಸೇನಾ ಆಗ್ರಹಿಸಿದ್ದಾರೆ.
ಡ್ರಗ್ಸ್ ನೀಡಿ ವೇಶ್ಯಾವಾಟಿಕೆ ನಡೆಸುತ್ತಿದ್ದರು: ಪ್ರಸಾದ್ ಅತ್ತಾವರ ಆರೋಪ
ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಪ್ರತಿಕ್ರಿಯಿಸಿದ್ದು, ನಮ್ಮ ರಾಮಸೇನೆ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ‘ಮಸಾಜ್ ಸೆಂಟರ್ನಲ್ಲಿ ಡ್ರಗ್ಸ್ ನೀಡಿ ವೇಶ್ಯಾವಾಟಿಕೆ ನಡೆಸುತ್ತಿದ್ದರು’ 16, 17 ವರ್ಷದ ಹೆಣ್ಣುಮಕ್ಕಳನ್ನು ಬಳಸಿಕೊಳ್ತಿದ್ದರೆಂದು ಆರೋಪ ಮಾಡಿದ್ದಾರೆ. ನಮ್ಮ ಕಾರ್ಯಕರ್ತನ ಸಂಬಂಧಿ ಯುವತಿ ಇದರಲ್ಲಿ ಸಿಲುಕಿದ್ದಾಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದೇವೆ ಎಂದರು.
ಮಂಗಳೂರಿನಲ್ಲಿ ಸುಮಾರು 25 ಮಸಾಜ್ ಪಾರ್ಲರ್ಗಳಿವೆ. ಖಚಿತ ಮಾಹಿತಿ ಮೇರೆಗೆ ಅದೆಲ್ಲವನ್ನೂ ಬಿಟ್ಟು ಈ ಮಸಾಜ್ ಪಾರ್ಲರ್ ಮೇಲೆ ರಾಮಸೇನೆ ಸಂಘಟನೆ ದಾಳಿ ನಡೆಸಿದೆ. ಮಸಾಜ್ ಪಾರ್ಲರ್ಗೆ ಅನುಮತಿ ಇತ್ತೋ ಇಲ್ಲವೋ ನಮಗೆ ಗೊತ್ತಿಲ್ಲ. ಹೆಣ್ಣುಮಕ್ಕಳ ರಕ್ಷಣೆ ಉದ್ದೇಶದಿಂದ ನಾವು ದಾಳಿ ನಡೆಸಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಸಾಜ್ ಸೆಂಟರ್ ಮಾಲೀಕ ಸುಧೀರ್ ಹೇಳಿದ್ದಿಷ್ಟು
ಮಸಾಜ್ ಸೆಂಟರ್ ಮಾಲೀಕ ಸುಧೀರ್ ಪ್ರತಿಕ್ರಿಯೆ ನೀಡಿದ್ದು, ದಾಳಿ ಮಾಡಿದ್ದವರೇ ಕೆಲವು ವಸ್ತುಗಳನ್ನು ತಂದು ಬಿಸಾಡಿದ್ದಾರೆ. ವಾರಕ್ಕೊಮ್ಮೆ ಅಧಿಕಾರಿಗಳು ಮಸಾಜ್ ಸೆಂಟರ್ ಪರಿಶೀಲಿಸುತ್ತಿದ್ದಾರೆ. ಕಾನೂನು ಪ್ರಕಾರ ಅನುಮತಿ ಪಡೆದು ಕಳೆದ 2 ವರ್ಷದಿಂದ ನಾವು ಮಸಾಜ್ ಸೆಂಟರ್ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಸುಮಾರು 12 ಜನರ ತಂಡ ಇಂದು ಏಕಾಏಕಿ ದಾಳಿ ನಡೆಸಿ ಎಲ್ಲಾ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಈ ರೀತಿ ದಾಳಿ ಮಾಡಿದರೆ ನಾವು ವ್ಯವಹಾರ ನಡೆಸುವುದು ಹೇಗೆ. ದಾಳಿ ನಡೆಸಿದವರ ಪೈಕಿ ನಮಗೆ ಯಾರೂ ಗೊತ್ತಿಲ್ಲ, ಶತ್ರುಗಳಲ್ಲ. ಘಟನೆ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸುವಂತೆ ಜಿ.ಪರಮೇಶ್ವರ್ ಸೂಚನೆ
ಘಟನೆ ಬಗ್ಗೆ ಉಡುಪಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸಲು ನಾನು ಸೂಚಿಸಿದ್ದೇನೆ. ಯಾವ ಉದ್ದೇಶಕ್ಕೆ ದಾಳಿಯಾಗಿದೆ ಗೊತ್ತಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ. ಇಂತಹ ಕೃತ್ಯಗಳು ನಡೆಯಬಾರದು. ಯಾರಿಗೂ ವ್ಯಾಪಾರ ಮಾಡಿಕೊಳ್ಳುವುದಕ್ಕೆ ಅಡ್ಡಿಪಡಿಸಬಾರದು. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.
ಅನೈತಿಕ ಚಟುವಟಿಕೆ ನಡೆಸುವ ಪಾರ್ಲರ್ಗಳಿದ್ದರೆ ದೂರು ಕೊಡಿ. ದೂರು ಕೊಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕಾರ್ಪೊರೇಷನ್ನವರು ಟ್ರೇಡ್ ಲೈಸೆನ್ಸ್ ಕೊಟ್ಟಿರುತ್ತಾರೆ. ಯಾವ ಕಂಡೀಷನ್ ಹಾಕಿ ಕೊಟ್ಟಿರ್ತಾರೆ ಅದನ್ನು ಪಾಲಿಸದಿದ್ದರೆ, ನಿಯಮಾವಳಿಗಳನ್ನು ಮೀರಿ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದಿದ್ದಾರೆ.
ಜಯರಾಮ ಅಂಬೆಕಲ್ಲು ಸ್ಪಷ್ಟನೆ
ಘಟನೆ ಕುರಿತಾಗಿ ಶ್ರೀರಾಮಸೇನೆ ಸಂಘಟನೆ ಅಧ್ಯಕ್ಷ ಜಯರಾಮ ಅಂಬೆಕಲ್ಲು ಮಾತನಾಡಿದ್ದು, ಆ ದಾಳಿಗೂ ಶ್ರೀರಾಮಸೇನೆ ಸಂಘಟನೆಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.