ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಮಹಾರಾಷ್ಟ್ರ: ಭಂಡಾರಾದ ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ; ಕನಿಷ್ಠ 8 ಸಾವು
ಘಟನಾ ಸ್ಥಳದಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಂಡಾರದಲ್ಲಿ ನಡೆದಿದೆ. ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ.
ಘಟನಾ ಸ್ಥಳದಲ್ಲಿ ಪಾರುಗಾಣಿಕಾ ಮತ್ತು ವೈದ್ಯಕೀಯ ಕಾರ್ಯಕರ್ತರು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸ್ಫೋಟದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ.ಲ್ಲಿ ಬದುಕುಳಿದವರಿಗಾಗಿ ರಕ್ಷಣಾ ಮತ್ತು ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಕಾರ್ಖಾನೆ ಆವರಣದಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ. ಸ್ಫೋಟದಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ , ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.