ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮಂಗಳೂರು: ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ
ಮಂಗಳೂರು:ಜ.24: ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು.
ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು.ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದ ಕೀರ್ತಿ ಇವರದ್ದು. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.