ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮಹಾಕುಂಭ ಮೇಳದಲ್ಲಿ ಸ್ಪೀಕರ್ ಯುಟಿ ಖಾದರ್: ನಾಗ ಸಾಧುಗಳು, ಅಘೋರಿಗಳೊಂದಿಗೆ ಆಧ್ಯಾತ್ಮಿಕ ಚರ್ಚೆ

ಪ್ರಯಾಗ್ ರಾಜ್: ಬೆಂಗಳೂರು: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ.ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡುವ ಖಾದರ್ ಸಾಧುಗಳೊಂದಿಗೆ ಬೆರೆತು, ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾದ ಮಹಾ ಕುಂಭ ಮೇಳದಲ್ಲಿ ಅದ್ಬುತ ಕ್ಷಣಗಳನ್ನು ಕಳೆದಿದ್ದಾರೆ.

ದಕ್ಷಿಣ ಕನ್ನಡದ ಆಪ್ತ ಸ್ನೇಹಿತರ ಜೊತೆಗೂಡಿ ಕುಂಭಮೇಳದ ಮಹಾನುಭವವನ್ನು ಪಡೆದಿದ್ದಾರೆ.ಎಲ್ಲಾರಲ್ಲೂ ಬೆರೆಯುವ ಮತ್ತು ಪರಸ್ಪರ ಧರ್ಮಗಳನ್ನು ಗೌರವಿಸುವ ಖಾದರ್ ಅವರ ನಿದರ್ಶನ ಇದೇ ಮೊದಲಲ್ಲ. ಮಂಗಳೂರಿನಲ್ಲಿ ಹಿಂದೂ ದೇವಾಲಯಗಳು, ಕ್ರಿಶ್ಚಿಯನ್ ಚರ್ಚ್‌ಗಳು ಮತ್ತು ಜೈನ ಆರಾಧನಾ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ.

ಹಲವು ವರ್ಷಗಳಿಂದ ವೈವಿಧ್ಯಮಯ ಧಾರ್ಮಿಕ ಆಚರಣೆಗಳು ಮತ್ತು ಹಬ್ಬಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಕುಂಭಮೇಳದಲ್ಲಿ ಅವರು ಭಾಗವಹಿಸಿದದ್ದು ಭಾರತದ ಸಾಂಸ್ಕೃತಿಕ, ಆಧ್ಯಾತ್ಮಿಕ ವೈವಿಧ್ಯತೆಯ ಸೌಂದರ್ಯದ ಪ್ರಬಲ ಸಂಕೇತವಾಗಿದೆ.ಹಲವು ವರ್ಷಗಳಿಂದ ವೈವಿಧ್ಯಮಯ ಧಾರ್ಮಿಕ ಆಚರಣೆಗಳು ಮತ್ತು ಹಬ್ಬಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಕುಂಭಮೇಳದಲ್ಲಿ ಅವರು ಭಾಗವಹಿಸಿದದ್ದು ಭಾರತದ ಸಾಂಸ್ಕೃತಿಕ, ಆಧ್ಯಾತ್ಮಿಕ ವೈವಿಧ್ಯತೆಯ ಸೌಂದರ್ಯದ ಪ್ರಬಲ ಸಂಕೇತವಾಗಿದೆ.

ಉತ್ತರ ಪ್ರದೇಶ ಸ್ಪೀಕರ್ ಸತೀಶ್ ಮಹಾನ ಅವರ ಆಹ್ವಾನದ ಮೇರೆಗೆ ಸ್ಪೀಕರ್ ಯುಟಿ ಖಾದರ್ ಅವರು ಪ್ರಯಾಗರಾಜ್ ಗೆ ಭೇಟಿ ನೀಡಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿದರು. ಕರ್ನಾಟಕ ಸ್ಪೀಕರ್ ಅವರು ತಮ್ಮ ಭೇಟಿಯ ಸಂದರ್ಭದಲ್ಲಿ ರಾಜ್ಯದ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಜೊತೆಯಲ್ಲಿದ್ದವರು ತಿಳಿಸಿದ್ದಾರೆ.

No Comments

Leave A Comment