ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

76ನೇ ಗಣರಾಜ್ಯೋತ್ಸವ: ಗಮನ ಸೆಳೆದ ಪ್ರಧಾನಿ ಮೋದಿ ಪೇಟ

ನವದೆಹಲಿ: ದೇಶಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪೇಟ ಗಮನಸೆಳೆದಿದೆ.

ಪ್ರಧಾನಿಯವರು ಈ ಬಾರಿ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹುವರ್ಣದ ಪೇಟವನ್ನು ಧರಿಸಿದ್ದಾರೆ. ಹಳದಿ ಮತ್ತು ಕೆಂಪು ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಧರಿಸಿದ್ದಾರೆ. ಈ ವರ್ಷ ಮೋದಿ ಅವರು ಬಿಳಿ ಕುರ್ತಾವನ್ನು ಧರಿಸಿದ್ದಾರೆ. ಜೊತೆಗೆ ಕಪ್ಪು ಕಂದು ಬಣ್ಣದ ಜಾಕೆಟ್ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದಾರೆ.

ಪ್ರತಿ ಬಾರಿಯೂ ಪ್ರಧಾನಿಯವರ ಪೇಟ ಆಕರ್ಷಕವಾಗಿರುತ್ತದೆ. ಈ ಬಾರಿ ಪ್ರಧಾನಿಯವರು ಯಾವ ಬಣ್ಣದ ಪೇಟ ತೊಡುತ್ತಾರೆ ಎಂಬ ಕುತೂಹಲ ಜನರಲ್ಲಿ ಇತ್ತು. ಅಂತೆಯೇ ಇಂದು ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆಯೇ ಅವರು ಧರಿಸಿರುವ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು.

ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವದ ಎರಡು ಸಂದರ್ಭಗಳಲ್ಲಿ ಪ್ರಧಾನಿಯವರ ಉಡುಗೆಯ ಆಯ್ಕೆಯು ಹೆಚ್ಚಿನ ಗಮನವನ್ನು ಸೆಳೆಯುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಪ್ರಧಾನಿಯವರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುತ್ತಾರೆ. ವಾಸ್ತವವಾಗಿ ಪ್ರಧಾನಿಯವರು ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಿದಾಗ ಅಲ್ಲಿನ ಸಂಸ್ಕೃತಿಯ ಬಗ್ಗೆ ಗೌರವವನ್ನು ತೋರಿಸುವ ಪ್ರಯತ್ನ ಮಾಡುತ್ತಾರೆ.

kiniudupi@rediffmail.com

No Comments

Leave A Comment