ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ನೈಜೀರಿಯಾ: ಗ್ಯಾಸೊಲಿನ್ ಟ್ಯಾಂಕರ್ ಸ್ಫೋಟದಲ್ಲಿ 18 ಮಂದಿ ಸಾವು
ಆಫ್ರಿಕನ್ ದೇಶ ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟಗೊಂಡಿದ್ದು, 18 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಸ್ಫೋಟದಿಂದಾಗಿ 17 ವಾಹನಗಳು ಸುಟ್ಟು ಭಸ್ಮವಾಗಿವೆ. ಟ್ರಕ್‌ನ ಬ್ರೇಕ್ ವಿಫಲವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ್ದ, ಇದರಿಂದಾಗಿ ಎಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು 17 ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಟ್ರೋಲ್ ತುಂಬಿದ ಟ್ಯಾಂಕರ್ ನಿಯಂತ್ರಣ ತಪ್ಪಿ 17 ವಾಹನಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ.
10 ಜನರಿಗೆ ಬಹು ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಒಂದು ವಾರದ ಹಿಂದೆ ನೈಜೀರಿಯಾದಲ್ಲಿ ಇದೇ ರೀತಿಯ ಘಟನೆಯಲ್ಲಿ ಸುಮಾರು 100 ಜನರು ಸಾವನ್ನಪ್ಪಿದ್ದರು. ಇತ್ತೀಚಿನ ಘಟನೆಯು ಜನವರಿ 25-26 ರ ತಡರಾತ್ರಿಯಲ್ಲಿ ನಡೆದಿದೆ. ಆಗ್ನೇಯ ರಾಜ್ಯವಾದ ಎನುಗುದಲ್ಲಿನ ಎನುಗು-ಒನಿತ್ಶಾ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿತ್ತು.
ನೈಜೀರಿಯಾ ಆಫ್ರಿಕಾದಲ್ಲಿ ಅತಿ ಹೆಚ್ಚು ತೈಲ ಉತ್ಪಾದಿಸುವ ದೇಶ ಮತ್ತು ಆಫ್ರಿಕಾದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ಹೇಳಲಾಗುತ್ತದೆ. ಇಲ್ಲಿ ಸರಕು ಸಾಗಣೆಗೆ ಸಮರ್ಥ ರೈಲ್ವೆ ವ್ಯವಸ್ಥೆ ಇಲ್ಲ. ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್‌ಗಳನ್ನು ಒಳಗೊಂಡ ಅಪಘಾತಗಳು ಸಾಮಾನ್ಯವಾಗಿದೆ. ಇದಕ್ಕೆ ಹದಗೆಟ್ಟ ರಸ್ತೆ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.