ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮೈಕ್ರೋ ಫೈನಾನ್ಸ್‌ಗೆ ಮತ್ತೊಂದು ಬಲಿ: ಸಿಎಂ ತವರು ಜಿಲ್ಲೆಯಲ್ಲಿ ಮಹಿಳೆ ಆತ್ಮಹತ್ಯೆ
ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಪ್ರಕರಣಗಳು ತಾರಕ್ಕಕ್ಕೇರಿದ್ದು, ಪ್ರತಿದಿನ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿವಿಧ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಚಿವರ ನೇತೃತ್ವದಲ್ಲಿ ಸಭೆ ನಡೆಸಿದರು, ಜನರಿಗೆ ಭರವಸೆಗಳನ್ನೂ ನೀಡಿದ್ದಾರೆ. ಆದರೂ ಕೂಡ ಸಿಎಂ ತವರಲ್ಲಿಯೇ ಮಹಿಳೆಯೊಬ್ಬರು ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ(53) ಎನ್ನುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಐಐಎಫ್ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಗಳಲ್ಲಿ 5 ಲಕ್ಷ ಸಾಲ ಮಾಡಿಕೊಂಡಿದ್ದರು. ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಈ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಈ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಈ ಹಿನ್ನೆಲೆ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಂತರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.