ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು:ಜ.27,ಸೋಮವಾರದ೦ದು ರಾಜ್ಯದ ಮುಖ್ಯಮ೦ತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು ಎಂದರು.
ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ಶಿವರಾಜ್ ಕುಮಾರ್ ತಿಳಿಸಿದ್ದಾರೆ ಎಂದು ಸಿಎಂ ಹೇಳಿದರು.