ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಸ್ಮೃತಿ ಮಂಧಾನಗೆ ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರು 2024ರ ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ 13 ಇನ್ನಿಂಗ್ಸ್​ಗಳನ್ನು ಆಡಿದ್ದ ಮಂಧಾನ ನಾಲ್ಕು ಭರ್ಜರಿ ಶತಕಗಳ ಸಹಿತ ಒಟ್ಟು 747 ರನ್ ಕಲೆಹಾಕಿದ್ದರು. 2024ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎಡಗೈ ಮಹಿಳಾ ಕ್ರಿಕೆಟ್ ಆಟಗಾರರ ಪೈಕಿ ಸ್ಮೃತಿ ಮಂಧಾನ ಅತಿ ಹೆಚ್ಚು ರನ್ ಗಳಿಸಿದ್ದಾರೆ.

ಉಳಿದಂತೆ ಲಾರಾ ವೊಲ್ವಾರ್ಡ್ (697), ಟ್ಯಾಮಿ ಬ್ಯೂಮಾಂಟ್ (554) ಮತ್ತು ಹೇಲಿ ಮ್ಯಾಥ್ಯೂಸ್ (469) ರನ್ ಕಲೆ ಹಾಕಿದ್ದಾರೆ.

No Comments

Leave A Comment