ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉತ್ತರ ಪ್ರದೇಶ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದನ ಬಂಧನ

ಲಖನೌ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಜನವರಿ 17 ರಂದು ಕಾಂಗ್ರೆಸ್ ಉತ್ತರ ಪ್ರದೇಶ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾಥೋಡ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ತನ್ನನ್ನು ಮದುವೆಯಾಗುವುದಾಗಿ ಮತ್ತು ರಾಜಕೀಯವಾಗಿ ಬೆಳೆಸುವುದಾಗಿ ಭರವಸೆ ನೀಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಕರೆ ವಿವರಗಳು ಮತ್ತು ಕರೆ ರೆಕಾರ್ಡಿಂಗ್‌ಗಳನ್ನು ಮಹಿಳೆ ಪೊಲೀಸರೊಂದಿಗೆ ಹಂಚಿಕೊಂಡಿದ್ದಾರೆ.

ಕಳೆದ ವಾರ, ಮಹಿಳೆಯ ಪತಿ ಐದು ವ್ಯಕ್ತಿಗಳ ವಿರುದ್ಧ ಪ್ರತ್ಯೇಕ ದೂರು ದಾಖಲಿಸಿದ್ದು, ರಾಥೋಡ್ ಮತ್ತು ಅವರ ಮಗ ಪ್ರಕರಣವನ್ನು ಇತ್ಯರ್ಥಪಡಿಸುವಂತೆ, ತಮ್ಮ ಕುಟುಂಬದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದರು.

No Comments

Leave A Comment