ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮಹಾಕುಂಭ ಮೇಳದಲ್ಲಿ ಭಾರೀ ಅಗ್ನಿ ಅವಘಡ: 12ಕ್ಕೂ ಹೆಚ್ಚು ಪೆಂಡಾಲ್‌ಗಳು ಸುಟ್ಟು ಭಸ್ಮ
ಪ್ರಯಾಗರಾಜ್:ಜ.30: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮಹಾಕುಂಭ ಮೇಳ ನಡೆಯುವ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪೆಂಡಾಲ್‌ಗಳು ಸುಟ್ಟು ಭಸ್ಮವಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಉಂಟಾದ ಬಗ್ಗೆ ವರದಿಯಾಗಿಲ್ಲ.
ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಅಗ್ನಿ ಅವಘಡ ಸಂಭವಿಸಿದಾಗ ಜನರು ಟೆಂಟ್ ಪ್ರದೇಶದಲ್ಲಿ ಇರಲಿಲ್ಲ. ಹೀಗಾಗಿ ಸಂಭವನೀಯ ಭಾರೀ ಅನಾಹುತ ತಪ್ಪಿದೆ. ಈ ಅವಘಡದಲ್ಲಿ 12ಕ್ಕೂ ಹೆಚ್ಚು ಪೆಂಡಾಲ್‌ಗಳು ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ.
ಬೆಂಕಿಯು ಕ್ಷಣಮಾತ್ರದಲ್ಲಿ ಭೀಕರ ಸ್ವರೂಪ ಪಡೆದುಕೊಂಡಿತು. ಅನೇಕ ಪೆಂಡಾಲ್‌ಗಳು ಬೆಂಕಿಯಿಂದ ಸುಟ್ಟು ಭಸ್ಮವಾದವು. ಈ ಘಟನೆಯ ಬಗ್ಗೆ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.