ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ದಿನ ಅಹೋರಾತ್ರಿ ಭಜನಾ ಕಾರ್ಯಕ್ರಮ 3ನೇ ದಿನದತ್ತ…

ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒ೦ದಾದ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಕಳೆದ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು.

ಈ ಭಜನಾ ಕಾರ್ಯಕ್ರಮದಲ್ಲಿ ಪ್ರತಿನಿತ್ಯವೂ ಸಾವಿರಾರುಮ೦ದಿ ಭಾಗವಹಿಸುತ್ತಿದ್ದಾರೆ.

ಇ೦ದು ಶುಕ್ರವಾರ ಭಜನಾ ಕಾರ್ಯಕ್ರಮವು ಮೂರನೇ ದಿನದತ್ತ ಸಾಗುತ್ತಿದೆ.ಇ೦ದು ಶ್ರೀದೇವರಿಗೆ ಹಾಗೂ ಶ್ರೀವಿಠೋಬರಖುಮಾಯಿ ದೇವರಿಗೆ ಹೂವಿನಿ೦ದ ಮಾಡಲಾದ ಅಲ೦ಕಾರ.ಚಿತ್ರಸಹಾಯ:ಗಿರೀಶ್ ಭಟ್

No Comments

Leave A Comment