ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಗುಜರಾತ್: ಖಾಸಗಿ ಬಸ್ ಕಂದಕಕ್ಕೆ ಉರುಳಿ 7 ಸಾವು; 15 ಮಂದಿ ಗಂಭೀರ
ಗಾಂಧೀನಗರ:ಫೆ.2. ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 15 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಸಂಭವಿಸಿದೆ.
ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್‌ನಿಂದ ಗುಜರಾತ್‌ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ನಾಸಿಕ್-ಗುಜರಾತ್ ಹೆದ್ದಾರಿಯ ಸಪುತಾರಾ ಘಾಟ್‌ನಲ್ಲಿ 200 ಅಡಿ ಆಳದ ಕಂದಕ್ಕೆ ಬಸ್ ಉರುಳಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮೃತಪಟ್ಟವರು ಹಾಗೂ ಗಾಯಗೊಂಡ ಪ್ರಯಾಣಿಕರು ಮಧ್ಯಪ್ರದೇಶದವರು ಎಂದು ತಿಳಿಯಲಾಗಿದ್ದು, ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.
ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಅಪಘಾತದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.