ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಬಜೆಟ್ ನಲ್ಲಿ ಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು, ಸಂಸದರು ವಿತ್ತ ಸಚಿವರ ಮೇಲೆ ಪ್ರಭಾವ ಬೀರುವಲ್ಲಿ ವಿಫಲ : ರಮೇಶ್ ಕಾಂಚನ್
ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಕೇವಲ ಬಿಹಾರ ರಾಜ್ಯವನ್ನು ವಿಶೇಷ ಗಮನದಲ್ಲಿಟ್ಟುಕೊಂಡು ತಯಾರಿಸಿದ ಬಜೆಟ್ ಆಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ.
ಮುಂಬರುವ ಬಿಹಾರ ಚುನಾವಣೆ ಹಾಗೂ ತಮ್ಮ ಮಿತ್ರ ಪಕ್ಷ ಜೆಡಿಯುಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ ಹೊರತು ದೇಶದಲ್ಲಿ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ಬಜೆಟ್ ನಲ್ಲಿ ಯಾವುದೇ ರೀತಿಯ ಯೋಜನೆಗಳನ್ನು ಉಲ್ಲೇಖಿಸಿಲ್ಲ ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ.
ಈ ಬಾರಿಯ ಬಜೆಟ್ ನಲ್ಲಿ ಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು ಆದರೆ ಇಲ್ಲಿನ ಸಂಸದರು ವಿತ್ತ ಸಚಿವರ ಮೇಲೆ ಪ್ರಭಾವಬೀರುವಲ್ಲಿ ವಿಫಲರಾಗಿದ್ದು ಈ ಬಜೆಟ್ ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್ ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಕರ್ನಾಟಕ ವಿರೋಧಿ ಬಜೆಟ್ ಆಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.