.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವಿಗೀಡಾಗಿದ್ದು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದಲ್ಲಿ ಮಧ್ಯಾಹ್ನ ನಿವೃತ್ತ ಸೇನಾಧಿಕಾರಿ ಮಂಜೂರ್ ಅಹ್ಮದ್ ವಾಗೆ, ಅವರ ಪತ್ನಿ ಮತ್ತು ಮಗಳ ಕಡೆಗೆ ಉಗ್ರರು ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಾಳಿಯ ಬಳಿಕ ಮೂವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈದ್ಯರ ಪ್ರಕಾರ, ಕಿಬ್ಬೊಟ್ಟೆಯ ಭಾಗಕ್ಕೆ ಗುಂಡು ತಗುಲಿದ ನಿವೃತ್ತ ಸೇನಾಧಿಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗಾಡಾಗಿದ್ದಾರೆ. ಕಾಲಿಗೆ ಗುಂಡು ತಗುಲಿದ ಅವರ ಪತ್ನಿ ಮತ್ತು ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಉಗ್ರರ ದಾಳಿಯ ನಂತರ, ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಯೋಧರ ತುಕಡಿ ಸ್ಥಳಕ್ಕೆ ತಲುಪಿದೆ. ದಾಳಿಕೋರರನ್ನು ಪತ್ತೆಹಚ್ಚಲು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಹಿರಿಯ ಭದ್ರತಾ ಅಧಿಕಾರಿಗಳು ಸಹ ಆ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

No Comments

Leave A Comment