ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾದ ಉದ್ಯಮಿಯಿಂದ 1.25 ಕೋಟಿ ದೇಣಿಗೆ
ಸುರತ್ಕಲ್:ಫೆ.4. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು ಲಕ್ಷ ಮೊತ್ತದ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.
ಸಂಜೆ ನಡೆದ ಪಾವಂಜೆ ಮೇಳದ ಶ್ರೀ ದೇವಿಮಹಾತ್ಮೆ ಯಕ್ಷಗಾನದ ಸಂದರ್ಭದಲ್ಲಿ ಶಾರದಾಪ್ರಸಾದ್ ಹಾಗೂ ನಳಿನಿ ಶಾರದಾ ಪ್ರಸಾದ್ ದಂಪತಿಗಳನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಆಡಳಿತ ಮೊಕ್ತೇಸರರು ಶಶೀಂದ್ರ ಕುಮಾರ್, ಪಟ್ಲ ಫೌಂಡೇಶನ್ ಟ್ರಸ್ಟ್ ನ ಪದಾಧಿಕಾರಿಗಳಾದ ಪಟ್ಲಗುತ್ತು ಮಹಾಬಲ ಶೆಟ್ಟಿ, ಸಿಎ ಸುದೇಶ್ ಕುಮಾರ್ ರೈ, ಸಿಎ ದಿವಾಕರ್ ರಾವ್, ಡಾ. ಸತೀಶ್ ಭಂಡಾರಿ, ಪ್ರದೀಪ್ ಆಳ್ವ ಕದ್ರಿ, ಭಂಡಾರಿ ಬಿಲ್ಡರ್ಸ್ನ ಮಾಲಕ ಲಕ್ಷ್ಮೀಶ್ ಭಂಡಾರಿ ಉಪಸ್ಥಿತರಿದ್ದರು.