ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ ವಕೀಲರ ಸಂಘದ ಬ್ಯಾಡ್ಮಿಂಟನ್ ಟೂರ್ನಮೆಂಟ್ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಿಗೆಆಹ್ವಾನ
ಉಡುಪಿ:ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ಹೈಕೋರ್ಟಿನ ಹಿರಿಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷ ಶ್ರೀ ಕಾಮೇಶ್ವರ್ ರಾವ್ ಇವರನ್ನು ಇಂದು ಫೆಬ್ರವರಿ ತಾ. 5ರಂದು ಭೇಟಿಯಾಗಿ ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘವು ಮಾರ್ಚ್ ತಾ. 1 ಮತ್ತು 2ರಂದು ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಮಟ್ಟದ ವಕೀಲರ ಕ್ರಿಕೆಟ್ – ವಾಲಿಬಾಲ್ – ತ್ರೋಬಾಲ್ ಮತ್ತು ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸಿತು. ಇದಕ್ಕೆ ಸಮ್ಮತಿಸಿದ ನ್ಯಾಯಮೂರ್ತಿಗಳು, ಪಂದ್ಯಾಕೂಟಕ್ಕೆ ಶುಭ ಹಾರೈಸಿದರು.
ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ರೆನೋಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಎ. ಆರ್., ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರೂರ್ ಸುಕೇಶ್ ಶೆಟ್ಟಿ, ಪ್ರಜ್ವಲ್ ಶೆಟ್ಟಿ, ಪಂದ್ಯಾಕೂಟದ ಮುಖ್ಯಸ್ಥರಾದ ಸಚಿನ್ ಕುಮಾರ್ ಶೆಟ್ಟಿ ಹಾಗೂ ಆಕಾಶ್ ಅಂಬಾಡಿ ಉಪಸ್ಥಿತರಿದ್ದರು.