ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ
ಪುತ್ತೂರು: ಆಟೋ ರಿಕ್ಷಾ ಬೈಕ್ ಢಿಕ್ಕಿ : ಸವಾರ ಸಾವು
ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಇಂದು ಬುಧವಾರ ಸಂಭವಿಸಿದೆ.
ಮೃತ ದುರ್ದೈವಿಯನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ದಿ. ಪುರುಷೋತ್ತಮ ಎಂಬವರ ಪುತ್ರ ಚೇತನ್(44) ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.