ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಭೀಕರ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಜನ ಸಾವು
ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 16 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮ್ಹೌ ತಹಸಿಲ್‌ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು ಮಿನಿ ಬಸ್ ಇಳಿಜಾರಿನಲ್ಲಿ ಚಲಿಸುತ್ತಿದ್ದ ಟ್ರೇಲರ್ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪುರುಷರು ಮತ್ತು ಮಿನಿ ಬಸ್‌ನಲ್ಲಿ ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಕರ್ನಾಟಕದ ಬೆಳಗಾವಿಯ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ 16 ಜನ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಸ್ವಾಮ್ಯದ ಮಹಾರಾಜ ಯಶ್ವಂತರಾವ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಇಂದೋರ್ ಗ್ರಾಮೀಣ) ರೂಪೇಶ್ ದ್ವಿವೇದಿ ಪಿಟಿಐಗೆ ತಿಳಿಸಿದ್ದಾರೆ.
16 ಜನರು ಗಾಯಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ.
ಉಜ್ಜಯಿನಿಯ ಪ್ರಸಿದ್ಧ ಮಹಾಕಾಳ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಮಿನಿ ಬಸ್‌ನಲ್ಲಿದ್ದ ಪ್ರಯಾಣಿಕರು ಕರ್ನಾಟಕದ ಬೆಳಗಾವಿಗೆ ಹಿಂತಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಇನ್ನು ಗುರುವಾರ ತಡರಾತ್ರಿ ನಡೆದ ಮತ್ತೊಂದು ರಸ್ತೆ ಅಪಘಾತದಲ್ಲಿ, ಮಧ್ಯಪ್ರದೇಶದ ಧಾರ್ ಜಿಲ್ಲೆಯ ಬ್ಲೈಂಡ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ನಾಲ್ವರು ಯುವಕರು ಪ್ರಯಾಣಿಸುತ್ತಿದ್ದ ಬೈಕ್ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಚೋಟಿ ಉಮರ್‌ಬಂದ್ ಮತ್ತು ಮುಂಡ್ಲಾ ಗ್ರಾಮಗಳ ನಡುವೆ ಗುರುವಾರ ರಾತ್ರಿ 11.50 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಒಂದೇ ಬೈಕ್‌ನಲ್ಲಿ ಸವಾರಿ ಮಾಡುತ್ತಿದ್ದ ನಾಲ್ವರು ಯುವಕರು, ತೀಕ್ಷ್ಣವಾದ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದ್ದಾರೆ ಎಂದು ಮನವಾರ್ ಪೊಲೀಸ್ ಠಾಣೆಯ ಉಸ್ತುವಾರಿ ಈಶ್ವರ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಮೃತರನ್ನು ಸಂದೀಪ್ (19), ಅನುರಾಗ್ (22), ಮನೀಶ್ (20) ಮತ್ತು ರೋಹನ್ (19) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರು ಶವಗಳನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.