ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ
ದೇಶದ್ರೋಹದ ಆರೋಪ: ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅರೆಸ್ಟ್
ಢಾಕಾ:ಫೆ,7. ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಲಾಗಿದ್ದು, ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ.
ಫೆಬ್ರವರಿ 6ರ ರಾತ್ರಿ ಮೆಹರ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರೆಜಾಲ್ ಕರೀಂ ಮಲ್ಲಿಕ್ ಮಾಹಿತಿ ನೀಡಿದ್ದಾರೆ. ದೇಶದ್ರೋಹದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆ ಕುರಿತು ಪ್ರಶ್ನೆ ಮಾಡಲಾಗುತ್ತಿದೆ. ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವನ್ನು ಅವರು ಟೀಕಿಸಿದ್ದರು ಎನ್ನಲಾಗಿದೆ.
ಮೆಹರ್ ಬಂಧನಕ್ಕೂ ಮುನ್ನ ಬಾಂಗ್ಲಾದ ಜಮಲ್‌ಪುರದ ಮನೆಯ ಮೇಲೆ ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ದಾಳಿ ನಡೆಸಿದ್ದಾರೆ. ಮನೆಯ ಬಳಿ ಬಂದು ವಸ್ತುಗಳನ್ನು ಹಾಳು ಮಾಡಿದ್ದಾರೆ. ಈ ಮನೆಯಲ್ಲಿ ಮೆಹರ್ ಅವರ ಕುಟುಂಬದವರು ವಾಸವಾಗಿದ್ದರು. ದಾಳಿಯ ಬಳಿಕ ಮೆಹೆರ್ ಅವರನ್ನು ಬಂಧಿಸಲಾಗಿದೆ.