ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
Delhi Election 2025: BJP-47, AAP-23, Cong-0; ಕೇಜ್ರಿವಾಲ್, ಸಿಸೋಡಿಯಾಗೆ ಸೋಲು
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಎದುರಾಗಿದ್ದು ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ.
ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದು, 3,182 ಮತಗಳ ಅಂತರದಲ್ಲಿ ಕೇಜ್ರಿವಾಲ್ ಸೋತಿದ್ದಾರೆ ಎಂದು ತಿಳಿದುಬಂದಿದೆ.
ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಈ ಮೂಲಕ ದೊಡ್ಡ ಗೆಲುವು ಸಾಧಿಸಿದ್ದು, ಇದು ಪ್ರಮುಖ ರಾಜಕೀಯ ಏರಿಳಿತವನ್ನು ಸೂಚಿಸುತ್ತದೆ.
2013 ರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮತ್ತು ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನೇ ಸೋಲಿಸಿದ್ದ ಕೇಜ್ರಿವಾಲ್ ಆದೇ ಕ್ಷೇತ್ರದಲ್ಲಿ ದಶಕದ ನಂತರ ಸೋತಿದ್ದಾರೆ.
ಚುನಾವಣಾ ಆಯೋಗದ ಮೂಲಗಳ ಪ್ರಕಾರ ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಿಂಗ್ 28448 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಸಿಎಂ 24583 ಮತಗಳನ್ನು ಪಡೆದಿದ್ದಾರೆ. ಆ ಮೂಲಕ ಕೇಜ್ರಿವಾಲ್ ಒಟ್ಟು 3865 ಮತಗಳ ಅಂತರದಲ್ಲಿ ಸೋತಿದ್ದಾರೆ. ಅಂತೆಯೇ ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಂದೀಪ್ ದೀಕ್ಷಿತ್ ಕೇವಲ 4254 ಮತಗಳನ್ನು ಪಡೆದಿದ್ದು, ಅವರು ಬರೊಬ್ಬರಿ 24194 ಮತಗಳ ಅಂತರದಲ್ಲಿ ಸೋತಿದ್ದಾರೆ