ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ಕಂದಾಯ ಇಲಾಖೆ ಕಾವೇರಿ 2.0 ಸಾಫ್ಟ್ವೇರ್ ಹ್ಯಾಕ್: FIR ದಾಖಲು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸರ್ಕಾರ
ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್ವೇರ್ ಹ್ಯಾಕ್ ಆಗಿರುವ ಬೆಳವಣಿಗೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶನಿವಾರ ತಿಳಿಸಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 2.0 ಸಾಫ್ಟ್ವೇರ್ ಹ್ಯಾಕ್ ಆಗಿರುವ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನೋಂದಣಿ ಪ್ರಕ್ರಿಯೆಗಳಿಗೆ ಅಡ್ಡಿಪಡಿಸಲು ಉದ್ದೇಶಪೂರ್ವಕವಾಗಿ ಹ್ಯಾಕ್ ಆಗಿರುವುದು ಕಂಡು ಬಂದರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಸಂಬಂಧ ಈಗಾಗಲೇ ವ್ಯಕ್ತಿಗಳು/ಸಂಸ್ಥೆಗಳು ಯಾರು ಎಂಬುದನ್ನು ತನಿಖೆ ಮಾಡಲು ಎಫ್‌ಐಆರ್ ದಾಖಲು ಮಾಡಲಾಗಿದೆ. ಭವಿಷ್ಯದಲ್ಲಿ ಅಂತಹ ದಾಳಿಗಳನ್ನು ತಡೆಯಲು ಈ ತನಿಖೆಯು ನಮಗೆ ಸಹಾಯ ಮಾಡುತ್ತದೆ. ಅಲ್ಲದೆ, ತಜ್ಞರಿಂದ ನಮ್ಮ ಐಟಿ ವ್ಯವಸ್ಥೆಯ ಭದ್ರತಾ ಲೆಕ್ಕಪರಿಶೋಧನೆಯನ್ನು ಸ್ವತಂತ್ರವಾಗಿ ನಡೆಸಲು ಸಾಧ್ಯವಾಗುತ್ತದೆ. . ಇದು ಐಟಿ ವ್ಯವಸ್ಥೆಯನ್ನು ಬಲಪಡಿಸಲು ನಮಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಸರ್ವರ್ ಸಮಸ್ಯೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಐಜಿಆರ್ ಪರಿಶೀಲಿಸಿದಾಗ ದುರುದ್ದೇಶದಿಂದ ಅಪರಿಚಿತರು ಕಾವೇರಿ 2.0 ಸಾಫ್ಟ್ವೇರ್ ಅನ್ನು ಹ್ಯಾಕ್ ಮಾಡಿ, ವೆಬ್‌ಸೈಟ್ ಪ್ರವೇಶಿಸಿ ಅದರಲ್ಲಿರುವ ಡೇಟಾಗಳನ್ನು ಕಳವು ಮಾಡಲು ನಕಲಿ ಖಾತೆಗಳನ್ನು ತೆರೆದಿರುವುದು ಬೆಳಕಿಗೆ ಬಂದಿದೆ.