ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮಹಾಕುಂಭ ಮೇಳ: ಸಂಗಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪವಿತ್ರ ಸ್ನಾನ
ಪ್ರಯಾಗರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.
ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು.
ಇಂದು ಪ್ರಯಾಗರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ವಾಗತಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನವರಿ 13 ರಂದು ಪ್ರಾರಂಭವಾದ ಮಹಾಕುಂಭವು ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆಯಾಗಿದ್ದು, ಜಗತ್ತಿನಾದ್ಯಂತ ಭಕ್ತರನ್ನು ಆಕರ್ಷಿಸುತ್ತದೆ.