.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೆ ನೋಟಿಸ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿದೆ.
ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು ಮತ್ತೆ ಅವರು ಉತ್ತರ ಸಹ ನೀಡಿದ್ದರು. ಆದರೆ ವಿಜಯೇಂದ್ರ ವಿರುದ್ಧ ನಿರಂತವಾಗಿ ಹೇಳಿಕೆ ನೀಡುವುದನ್ನು ಮಾತ್ರ ನಿಲ್ಲಿಸಿಲ್ಲ. ಹೀಗಾಗಿ ಇಂದು ಮತ್ತೊಮ್ಮೆ ಯತ್ನಾಳ್ ಅವರಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ.
ಈ ನೋಟಿಸ್ ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿದ್ದು, ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.
ದೆಹಲಿಯಲ್ಲಿದ್ದ ಯತ್ನಾಳ್ ಅವರು ಈಗ ಹೈದರಾಬಾದ್ ನತ್ತ ಪ್ರಯಾಣ ಬೆಳಸಿದ್ದು, ಬಿಜೆಪಿ ಶಿಸ್ತು ಸಮಿತಿ ನೀಡಿದ ನೋಟಿಸ್ ಇನ್ನೂ ಅವರ ಕೈಸೇರಿಲ್ಲ.